Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಆಗಬಹುದು : ಡಿ. ಕೆ ಶಿವಕುಮಾರ್ 

Advertisement

ಚಿತ್ರದುರ್ಗ : ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಆಗಬಹುದು. ಆಗ ಎಲ್ಲಾ ಸಚಿವರುಗಳು ಕೈ ಜೋಡಿಸಿ ಕೆಲಸ ಮಾಡಬೇಕಾಗುತ್ತದೆ. ಒಟ್ಟಾಗಿ ಇಡೀ ರಾಜ್ಯದ ಬರ ಪರಿಸ್ಥಿತಿಯನ್ನು ಅವಲೋಕಿಸಬೇಕು. 

ಹಳ್ಳಿಗಳಲ್ಲಿ ರೈತರ ಬದುಕಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಇದೇ ನಮ್ಮಮುಂದಿರುವ ಹೊಣೆಗಾರಿಕೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಶನಿವಾರ ನಡೆದ ದ ಬೆಂಗಳೂರು ಪ್ರಾದೇಶಿಕ ವಿಭಾಗ ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಸರಕಾರ ಹಾಗೂ ಆಡಳಿತಕ್ಕೆ ಹೊಸ ರೂಪ ನೀಡಲು ನಾವು ಮುಂದಾಗಿದ್ದೇವೆ. ನಾವೆಲ್ಲರೂ ಟೀಮ್ ಕರ್ನಾಟಕವಾಗಿ ಕೆಲಸ ಮಾಡಬೇಕಿದೆ. ಪ್ರಜಾಸೇವಾ ಇಲಾಖೆ ಸ್ಥಾಪನೆ ಹೊಸ ಆಲೋಚನೆ. ಶಾಸಕರು, ಅಧಿಕಾರಿಗಳು ಈ ಇಲಾಖೆ ಮೂಲಕ ಜನರ ಮಧ್ಯೆ ಸರ್ಕಾರ ಇರುವಂತೆ ನೋಡಿಕೊಳ್ಳಬೇಕು. ಜನರ ಸಮಸ್ಯೆಗಳನ್ನು ಗಮನಿಸಿ ಬಗೆಹರಿಸಬೇಕು. ಜನರ ಬಳಿಗೆ ಸರ್ಕಾರವೇ ಹೋಗಬೇಕು ಎಂದು ಹೇಳಿದರು.

ಮೊದಲನೇ ಮತ್ತು ಮೂರನೇ ಶನಿವಾರ ಪ್ರತಿ ವಿಧಾನಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನರ ಸಮಸ್ಯೆ ಆಲಿಸಬೇಕು, ಬಗೆಹರಿಸಬೇಕು. 

ಇದೇ ಪ್ರಜಾಸೇವಾ ಇಲಾಖೆಯ ಧೈಯೋದ್ದೇಶ. ಪ್ರತಿ ಮನೆಗೂ ಸರಕಾರ ತಲುಪುತ್ತಿದೆ ಎಂದು ಜನರಿಗೆ ಮನವರಿಕೆ ಮಾಡಿಕೊಡಬೇಕು. 

ಜನರು ನೀಡಿದ ಅರ್ಜಿಗೆ ಪರಿಹಾರ ಸಿಗುವ ತನಕ ಅದರ ಬಗ್ಗೆ ಗಮನಹರಿಸಬೇಕು. ಸಚಿವರು ಎಲ್ಲಾ ಕ್ಷೇತ್ರಗಳಿಗೂ ಪ್ರವಾಸ ಮಾಡಬೇಕು. 

ಯಾವುದೇ ಪಕ್ಷದ ಶಾಸಕರಿದ್ದರೂ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಹವಾಲು ಸ್ವೀಕರಿಸಿ, ಪರಿಹರಿಸಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸುರೇಬಾನ-ಮನಿಹಾಳ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಕ್ರೀಡೆ, ಇ ಎಲ್ ಸಿ. ರೇಂಜರ್ ಮತ್ತು ರೋವರ್ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ಜಿಂಬಾಬ್ವೆಗೆ ೨೨೦ ರನ್‌ಗಳ ಗೆಲುವಿನ ಟಾರ್ಗೆಟ್ಥಣಿಸಂದ್ರ ವಾರ್ಡಿನ ರಾಚೇನಹಳ್ಳಿಯ ಕಾಂಗ್ರೆಸ್ ಪ್ರಭಾವಿ ಮುಖಂಡ ಕೃಷ್ಣಮೂರ್ತಿ ಎಂ ಸೇರಿದಂತೆ ನೂರಾರು ಜನ ಸಂಗಡಿಗರು ಬಿಜೆಪಿಗೆ ಸೇರ್ಪಡೆವೈಭವ ಸೂರ್ಯವಂಶಿ ೨೦ ರನ್‌ಗೆ ಔಟ್ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಆಗಬಹುದು : ಡಿ. ಕೆ ಶಿವಕುಮಾರ್ ಸಾಲದ ಸುಳಿಗೆ ಸಿಲುಕಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮುಸ್ಲಿಂ ಸಮುದಾಯದ ವಿರುದ್ಧ ಸಿ.ಟಿ,ರವಿ ನಿಂದನಾತ್ಮಕ ಹೇಳಿಕೆ : ಸಿ.ಟಿ ರವಿ ವಿರುದ್ಧ ಎಫ್‌ಐಆರ್ ಕೊನೆಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ‘ರೋಹಿತ್ ನಿವೃತ್ತಿ ಪ್ರಶ್ನೆಯೇ ಇಲ್ಲ’ಮಾಜಿ ಸಚಿವ, ಉಪಸಭಾಪತಿ ಸಿ. ವೀರಣ್ಣ ವಿಧಿವಶ