Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ ಸಿಎಂ : ಇಂದು ಭರ್ಜರಿ ಪ್ರಚಾರ 

Advertisement
ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಪ್ರಚಾರ ರಂಗೇರಿದೆ. ಇಂದಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಲಕೋಟೆಯ ವಿವಿಧೆಡೆ ಪ್ರಚಾರ ಕೈಗೊಂಡಿದ್ದಾರೆ.

ಸೋಮವಾರ ಮತ್ತು ಮಂಗಳವಾರ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಸಿದ್ದರಾಮಯ್ಯ ಪ್ರಚಾರ ನಡೆಸಲಿದ್ದಾರೆ.ಸಿಎಂ ಪ್ರಚಾರದಿಂದಾಗಿ ಚುನಾವಣೆ ಕಣ ರಂಗೇರಲಿದೆ. ಸೋಮವಾರ ಬೆಳಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನ ಮೂಲಕ ಬಳ್ಳಾರಿಗೆ ತೆರಳಲಿರುವ ಅವರು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಆಲಮಟ್ಟಿಗೆ ತೆರಳಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಸುತಗುಂಡಾರ ಗ್ರಾಮದಲ್ಲಿ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಆಯೋಜಿಸಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಮತಯಾಚಿಸಲಿದ್ದಾರೆ. ನಂತರ ನಾಯನೇಗಲಿ, ರಾಂಪುರ, ಬೇವೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿ ಆಲಮಟ್ಟಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಮಂಗಳವಾರ ಬೆಳಿಗ್ಗೆ 10.50 ಕ್ಕೆ ಬಾಗಲಕೋಟೆಯ ಮುಗೊಳ್ಳಿಯಲ್ಲಿ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ನೀಲಾನಗರ ಗ್ರಾಮ, ಸಂಜೆ 4 ಗಂಟೆಗೆ ಐಹೊಳೆ, 6 ಗಂಟೆಗೆ ಅಮೀನಗಢ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಂಗಳವಾರ ರಾತ್ರಿ ಬಾಗಲಕೋಟೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಏಪ್ರಿಲ್ 9ರಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನ ನಡೆಯಲಿದೆ. ಇಂದಿನಿಂದ ಉಮೇಶ್ ಮೇಟಿ ಪರವಾಗಿ ಸಿದ್ದರಾಮಯ್ಯ ಪ್ರಚಾರ ನಡೆಸಲಿದ್ದಾರೆ.

ಇಂದು ಮತ್ತು ನಾಳೆ ಮೊದಲ ಹಂತದಲ್ಲಿ ಸಿದ್ದರಾಮಯ್ಯ ಪ್ರಚಾರ ಕೈಗೊಂಡಿದ್ದಾರೆ. ಎರಡನೇ ಹಂತದಲ್ಲಿ ಏ. 3 ರಿಂದ ಪ್ರಚಾರ ನಡೆಸುವರು. ಬಾಗಲಕೋಟೆ ಕ್ಷೇತ್ರದಲ್ಲಿ 5 ದಿನ ಸಿದ್ದರಾಮಯ್ಯ ಪ್ರಚಾರ ನಡೆಸಲಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದ ಹಾಲುಮತದ ಹೆಚ್.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ಕ್ಷೇತ್ರದಲ್ಲಿ ಉಮೇಶ್ ಮೇಟಿ ಗೆಲ್ಲಿಸಲು ಉಪಚುನಾವಣೆಯನ್ನು ಸಿದ್ದರಾಮಯ್ಯ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದಾರೆ.

ಸರ್ಕಾರದ ವರ್ಚಸ್ಸಿನ ಜೊತೆಗೆ ಸಮುದಾಯದ ಗೌರವ ಕಾಪಾಡಬೇಕಿದೆ. ಬಾದಾಮಿ ಕ್ಷೇತ್ರದಲ್ಲಿ ಅವರು ಸ್ಪರ್ಧಿಸಿದಾಗ ಒಮ್ಮೆ ಮಾತ್ರ ಪ್ರಚಾರ ನಡೆಸಿದ್ದರು. ಇದೀಗ ಆಪ್ತನ ಮಗನ ಗೆಲ್ಲಿಸಲು ಐದು ದಿನ ಪ್ರಚಾರ ನಡೆಸಲಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ