Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಯನ್ನೇ ಮುರಿದು ತಿಂದ ಜಿರಳೆ ಪಕ್ಷ : 4 ದಿನಗಳಲ್ಲಿ 9.6 ಮಿಲಿಯನ್ ಫಾಲೋವರ್ಸ್

Advertisement

ಜಿರಳೆ ಪಕ್ಷ ಅಥವಾ ಕಾಕ್ರೋಚ್ ಜನತಾ ಪಾರ್ಟಿ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಧೂಳೆಬ್ಬಿಸುತ್ತಿದೆ.

ನೇಪಾಳದಲ್ಲಿ ಸರ್ಕಾರದ ವಿರುದ್ಧ ಅಲ್ಲಿನ ಜೆನ್‌ಝೀಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿ ಹಲವು ವರ್ಷಗಳ ಕಾಲ ತಮ್ಮನ್ನು ಆಳಿದ್ದವರನ್ನೇ ತಪ್ಪು ಎಂದು ಸಾರಿ ಹೇಳಿದ್ದರು.

ಅದೇ ರೀತಿ ಭಾರತದಲ್ಲಿ ರಸ್ತೆಗಿಳಿದು ಹಿಂಸಾತ್ಮಕ ಪ್ರತಿಭಟನೆ ನಡೆಸದಿದ್ದರೂ ಗಾಂಧಿ ತತ್ವ ಪಾಲಿಸಿರುವ ಜೆನ್‌ ಝೀಗಳು ಸೈಲೆಂಟ್ ಆಗಿಯೇ ತಮ್ಮ ವಿರುದ್ಧ ನಾಲಿಗೆ ಹರಬಿಟ್ಟವರ ವಿರುದ್ಧ ಉಗ್ರ ಹೋರಾಟ ಮಾಡಿದ್ದರೆ.

ಸುಪ್ರೀಂನ ವಕೀಲರೊಬ್ಬರು ಹಿರಿಯ ವಕೀಲನಾಗಲು ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ್ದ ಸುಪ್ರೀಂ ನ್ಯಾಯಮೂರ್ತಿ ಸೂರ್ಯ ಕಾಂತ್ ಆತ ಅನುರಿಸಿದ್ದ ಮಾರ್ಗದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದರು. 

ಅಲ್ಲದೇ ‘ಕೆಲವು ಯುವಕರು ಜಿರಳೆಗಳು ಇದ್ದಂತೆ. ಯಾವುದೇ ಉದ್ಯೋಗ ಪಡೆದುಕೊಳ್ಳಲಾಗದೇ ಅಥವಾ ಕೆಲಸದಲ್ಲಿ ಸರಿಯಾದ ಸ್ಥಾನ ಪಡೆದುಕೊಳ್ಳಲಾಗದೇ ವಿಫಲರಾಗುತ್ತಾರೆ. 

ಅಂಥಹ ಯುವಕರು ತಾವೇ ಮಾಧ್ಯಮಗಳಾಗಿ, ಸಾಮಾಜಿಕ ಮಾಧ್ಯಮಗಳಾಗಿ, ಮಾಹಿತಿ ಹಕ್ಕು ಕಾರ್ಯಕರ್ತರಾಗಿ ಸಮಾಜದ ಮೇಲೆ ದಾಳಿ ಮಾಡಲು ಆರಂಭಿಸುತ್ತಾರೆ’ ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆ ಭಾರತದ ಯುವ ಜನತೆ ಕಿವಿಗೆ ಬೀಳುತ್ತಿದ್ದಂತೆ ರೊಚ್ಚಿಗೆದ್ದರು. 30 ವರ್ಷದ ಅಭಿಜಿತ್ ದಿಪ್ಕೆ ಎನ್ನುವವರು ಕಾಕ್ರೋಚ್ ಜನತಾ ಪಾರ್ಟಿಯನ್ನು ಆರಂಭಿಸಿದರು.

ಸಾಮಾಜಿಕ ಜಾಲತಾಣದಲ್ಲಿ ಈ ಪಾರ್ಟಿಯ ಖಾತೆ ಮೇ 16ರಂದು ಆರಂಭವಾಗುತ್ತಿದ್ದಂತೆ ಅಬ್ಬರಿಸಿದ ಭಾರತದ ಯುವ ಜನತೆ ದೊಡ್ಡ ಮಟ್ಟದಲ್ಲಿ ಖಾತೆಯನ್ನು ಅನುಸರಿಸಲು ಆರಂಭಿಸಿದ್ದಾರೆ.

ಖಾತೆಯನ್ನು ನಿರ್ವಹಿಸಲು ದೊಡ್ಡ ದೊಡ್ಡ ಎಸಿ ಇರುವ ಆಫೀಸ್ ಇಲ್ಲದೇ, ನೂರಾರು ಕೆಲಸಗಾರರಿಲ್ಲದೇ ಆರಂಭವಾದ ಕಾಕ್ರೋಚ್ ಜನತಾ ಪಾರ್ಟಿ ಖಾತೆಗೆ ಕೇವಲ 4 ದಿನಗಳಲ್ಲಿ ಬರೋಬ್ಬರಿ 9.6 ಮಿಲಿಯನ್ ಫಾಲೋವರ್ಸ್ ( ಮೇ 21ರ ಬೆಳಗ್ಗೆ 7 ಗಂಟೆ ಸಮಯಕ್ಕೆ ) ಬಂದಿದ್ದಾರೆ.

ಈ ಮೂಲಕ ದೇಶದ ಅತಿಹೆಚ್ಚು ರಾಜ್ಯಗಳಲ್ಲಿ ಗೆದ್ದು ಬಲಿಷ್ಠ ಪಕ್ಷ ಎನಿಸಿಕೊಂಡಿರುವ ಭಾರತೀಯ ಜನತಾ ಪಾರ್ಟಿಯನ್ನು ಕಾಕ್ರೋಚ್ ಜನತಾ ಪಾರ್ಟಿ ಹಿಂದಿಕ್ಕಿದೆ. ಬಿಜೆಪಿಯ ಮುಖ್ಯ ಖಾತೆಗೆ 8.8 ಮಿಲಿಯನ್ ಹಿಂಬಾಲಕರಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವಕಪ್ ಫುಟ್‌ಬಾಲ್: ಕೊಲಂಬಿಯಾಗೆ ೩-೧ ರ ಜಯದೆಹಲಿಯಲ್ಲೂ ದೋಸೆಯ ಘಮ, ಘಮ15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್ ಡಿಎ ಗ್ಲೇನ್ ಫಿಲಿಪ್ಸ್ ಶತಕ: ಕಿವೀಸ್ ಉತ್ತಮ ಮೊತ್ತಮುಖ್ಯಮಂತ್ರಿಯಾದ ಬಳಿಕ ಮೊದಲ ಟಾಸ್ಕ್ ನಲ್ಲೇ ಗೆದ್ದು ಬೀಗಿದ ಡಿ.ಕೆ.ಶಿವಕುಮಾರ್ ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು : ಡಿ.ಕೆ.ಶಿವಕುಮಾರ್60ನೇ ವಯಸ್ಸಿನಲ್ಲಿ ಪೇಸ್ ಬುಕ್ ಲವ್ : 80 ವರ್ಷದ ವರನ ವರಿಸಿದ ಹಿರಿಯ ನಟಿ ಸ್ಯಾಂಡ್ ಮಾಫಿಯಾ : ಬಿಜೆಪಿ ಮುಖಂಡ ಸೇರಿ ಮೂವರನ್ನು ಕಾರಿನಲ್ಲೇ ಸುಟ್ಟ ಕಿರಾತಕರುವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಐದೂ ಅಭ್ಯರ್ಥಿಗಳು ಗೆಲುವು ಪಕ್ಕಾ : ಲಕ್ಷ್ಮೀ ಹೆಬ್ಬಾಳ್ಕರ್ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುವುದಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ