LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಮಲಗಿದ್ದ ಪತ್ನಿಯನ್ನು ಎಳೆದೊಯ್ದು ಬರ್ಬರವಾಗಿ ಹತ್ಯೆಗೈದ ಗಂಡ

Advertisement
ಬೆಳಗಾವಿ: ಪತಿ-ಪತ್ನಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮಲಗಿದ್ದ ಪತ್ನಿಯನ್ನು ಎಳೆದೊಯ್ದು ನಡುರಸ್ತೆಯಲ್ಲಿ ಕಲ್ಲಿನಿಂದ ಜಜ್ಜಿ ಪತಿಯೇ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ.ತಾಯಿಗೆ ಬೈದಿದ್ದಕ್ಕೆ ಹಾಗೂ ಪತ್ನಿ ಶೀಲ ಶಂಕಿಸಿ ಪತಿ ಈ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಬಸವರಾಜ ಜೋಡಳ್ಳಿ ಕೊಲೆ ಮಾಡಿದ ಆರೋಪಿ. ಶಿವಕ್ಕ ಜೋಡಳ್ಳಿ( 33) ಪತಿಯಿಂದ ಕೊಲೆಯಾದ ಪತ್ನಿ. ದೊಡವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊದಲ ಗಂಡ ಅಕಾಲಿಕ ಮರಣದ ನಂತರ ಶಿವಕ್ಕ, ಬಸವರಾಜ ಜೋಡಳ್ಳಿಯನ್ನ ಪ್ರೀತಿಸಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಇಬ್ಬರು 15 ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದರು. ಆದರೆ ಗಂಡನ ಕಿರುಕುಳಕ್ಕೆ ಬೇಸತ್ತ ಶಿವಕ್ಕ ತನ್ನಿಬ್ಬರು ಮಕ್ಕಳ ಜೊತೆಗೆ ಪ್ರತ್ಯೇಕವಾಗಿ ಮಠವೊಂದರಲ್ಲಿ ವಾಸವಾಗಿದ್ದರು.

ಇಬ್ಬರು ಮಕ್ಕಳ ಜೊತೆಗೆ ವಾಸವಾಗಿದ್ದ ಶಿವಕ್ಕ, ಮೊದಲ‌ ಮಗಳನ್ನ ಗಂಡನ ಮನೆಯಲ್ಲಿ ಬಿಟ್ಟಿದ್ದಳು. ಮಗಳನ್ನ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಅಂತಾ ಅತ್ತೆ ಜೊತೆಗೆ ಫೊನ್​​ನಲ್ಲಿ ಜಗಳವಾಡಿದ್ದಾರೆ.

ತಾಯಿಗೆ ಬೈದಿದ್ದಕ್ಕೆ ಮತ್ತು ಪತ್ನಿ ಶೀಲ ಶಂಕಿಸಿ ಶಿವಕ್ಕ ಮಲಗಿದಾಗಲೇ ಎಳೆದೊಯ್ದು ಪತಿ ಮಹಾಶಯ ನಡುರಸ್ತೆಯಲ್ಲಿ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಇಂದು ಬೆಳಿಗ್ಗೆ ಸುಮಾರು 7:30ರ ಸುಮಾರಿಗೆ ಈ ಘಟನೆ ನಡೆದಿದೆ. ಮೊದಲು ಪತ್ನಿ ಮೇಲೆ ಹಲ್ಲೆ ಮಾಡಿದ್ದು, ನಂತರ ಚಾಕುವಿನಿಂದ ಇರಿದಿದ್ದಾನೆ. ಬಳಿಕ ಕಲ್ಲಿನಿಂದ ಬಜ್ಜಿ ಕೊಂದಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪತಿ ಬಸವರಾಜ್ ಜೋಡಳ್ಳಿ ವೃತ್ತಿಯಲ್ಲಿ ಡ್ರೈವರ್ ಆಗಿದ್ದಾನೆ. ಈ ದಂಪತಿ ಆಗಾಗ ಜಗಳವಾಡುತ್ತಿದ್ದು, ಪೊಲೀಸ್​ ಠಾಣೆ ಮೆಟ್ಟಿಲೇರಿದ್ದರು.

ಜಗಳದಿಂದಾಗಿ ಪತಿ ಊರು ಬಿಟ್ಟು ಹೋಗಿದ್ದ. ಇತ್ತೀಚೆಗಷ್ಟೇ ಗ್ರಾಮಕ್ಕೆ ಮರಳಿದ್ದ. ಕಳೆದ ಎರಡು-ಮೂರು ವರ್ಷಗಳಿಂದ ಇಬ್ಬರೂ ಬೇರೆ ಬೇರೆಯಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ