Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿ: ನೆಲ ನೋಡಿದ ಕನ್ನಡ ಧ್ವಜ

Advertisement
ತುರುವೇಕೆರೆ: ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಕನ್ನಡ ರಾಜ್ಯೋತ್ಸವದಂದು ಕನ್ನಡ ಧ್ವಜ ನೆಲ ನೋಡುವಂತಾಗಿದೆ.

ನವೆಂಬರ್ 01 ಕನ್ನಡ ರಾಜ್ಯೋತ್ಸವವನ್ನು ಕಡ್ಡಾಯವಾಗಿ ಎಲ್ಲಾ ಸರ್ಕಾರಿ ಕಛೇರಿಗಳು, ಶಾಲಾ ಕಾಲೇಜಿನಲ್ಲಿ ಆಚರಿಸಿ ಧ್ವಜಾರೋಹಣ ನೆರವೇರಿಸಬೇಕೆಂದು ಸರ್ಕಾರ ಆದೇಶಿಸಿದೆ. ಆದರೆ ತುರುವೇಕೆರೆ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸರ್ಕಾರದ ಆದೇಶವನ್ನು ನಿರ್ಲಕ್ಷಿಸಿ ಕಾಟಾಚಾರಕ್ಕೆಂಬಂತೆ‌ ಮರದ ಕೋಲಿಗೆ ಬಾವುಟ ಕಟ್ಟಿ ಕಟ್ಟಡದ ಕಂಬಕ್ಕೆ ತಗುಲು ಹಾಕಿ ಹೋಗಿದ್ದಾರೆ.

ಕನ್ನಡ ನಾಡಲ್ಲಿ ಕನ್ನಡ ಭಾಷೆಯ ಮಡಿಲಲ್ಲಿ, ಕನ್ನಡ ನೆಲದ ಅನ್ನ ತಿನ್ನುತ್ತಾ ಜೀವನ ಸಾಗಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಅನ್ನದ ಋಣಕ್ಕಾದರೂ ಕನ್ನಡ ರಾಜ್ಯೋತ್ಸವವನ್ನು ಗೌರವದಿಂದ ಆಚರಿಸಬೇಕಿತ್ತು, ಕನ್ನಡ ನೆಲ, ಜಲ, ಭಾಷೆ ಹಾಗೂ ಧ್ವಜಕ್ಕೆ ಪ್ರತಿ ಕ್ಷಣ ಗೌರವ ನೀಡಬೇಕು. ಆದರೆ ರಾಜ್ಯೋತ್ಸವದ ದಿನದಂದೇ ಬೇಕಾಬಿಟ್ಟಿ ಬಾವುಟವನ್ನು ಕಂಬಕ್ಕೆ ಕಟ್ಟಿ ಹೋಗಿರುವುದು, ಆ ಬಾವುಟವು ಕೆಲವೇ ಕ್ಷಣದಲ್ಲಿ ನೆಲ ನೋಡುವಂತಾಗಿರುವುದು ಬೇಸರದ ಸಂಗತಿಯಾಗಿದೆ.

ಕನ್ನಡ ಧ್ವಜಕ್ಕೆ ಅವಮಾನವಾಗುವ ರೀತಿ ನಡೆದುಕೊಂಡಿರುವ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ‌ ನಿರ್ದೇಶಕರು, ನೌಕರರು, ಸಿಬ್ಬಂದಿಯನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು ಹಾಗೂ ಕಾನೂನು ರೀತಿ ತಾಲೂಕಯ ಆಡಳಿತದ ದಂಡಾಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಕನ್ನಡ ಪರ ಸಂಘಟನೆಗಳು, ನಾಗರೀಕರು ಆಗ್ರಹಿಸಿದ್ದಾರೆ.

ವರದಿ: ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ