LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕಂದಗಲ್ಲ ಗ್ರಾಮದ ಸುವರ್ಣಗಿರಿ ರುದ್ರುಸ್ವಾಮಿ ಮಠದಲ್ಲಿ ಮಹಾತ್ಮರ ಜೀವನ ದರ್ಶನ

Advertisement
ಡಾ ಚನ್ನಮಲ್ಲ ಮಹಾಸ್ವಾಮಿಗಳು ಹಾಗೂ ಭಕ್ತರು ಮಹಾತ್ಮರ ಜೀವನ್ ದರ್ಶನ, ಕರಪತ್ರ ಬಿಡುಗಡೆ ಗೊಳಿಸಿದರು.

ಕಂದಗಲ್ಲ :ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವು ಶ್ರಾವಣ ಮಾಸದ ಅಂಗವಾಗಿ ಪುರಾಣ ಪ್ರವಚನ ಕಾರ್ಯಕ್ರಮ ನೆಡೆಯಲಿದೆ. ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಶ್ರೀಮಠದಲ್ಲಿ ಶ್ರೀಗಳ ನೇತೃತ್ವದಲ್ಲಿ ಕರೆಯಲಾಗಿತ್ತು ಸಭೆಯಲ್ಲಿ " ಈ ಸಲದ ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ಮಹಾತ್ಮರ ಜೀವನ ದರ್ಶನ" ಕಾರ್ಯಕ್ರಮ ಏರ್ಪಡಿಸಲಾಗಿದ್ದು ಅದರ ಕರಪತ್ರಗಳನ್ನು ಗ್ರಾಮದ ಸುವರ್ಣಗಿರಿ ಶ್ರೀ ರುದ್ರುಸ್ವಾಮಿಮಠದ ಡಾ ಚನ್ನಮಲ್ಲ ಮಹಾಸ್ವಾಮೀಗಳು ಹಾಗೂ ಭಕ್ತರು ಬಿಡುಗೋಡೆಗೊಳಿಸಿದರು.



ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಶ್ರೀಗಳು ಕಂದಗಲ್ಲ ಗ್ರಾಮಕ್ಕೆ ಇದೊಂದು ವಿಶಿಷ್ಟ ರೀತಿಯ ವಿಭಿನ್ನವಾದ ಭಕ್ತಿ ಪ್ರಧಾನ ಕಾರ್ಯಕ್ರಮ ವಾಗಿದ್ದು ತಿಂಗಳ ಪರ್ಯಂತ ಪ್ರತಿದಿನ ಒಬ್ಬಬ್ಬ ಮಹಾತ್ಮರ ಜೀವನ್ ದರ್ಶನವನ್ನ ತಮ್ಮ್ ಮುಂದೆ ಪ್ರಸ್ತುತಪಡಿಸ ಲಾಗುವದು ಇದನ್ನು ಪ್ರತಿಯೊಬ್ಬರೂ ತಿಳಿದುಕೊಂಡು ತಮ್ಮ ಜೀವನದಲ್ಲಿ ಅಳವಿಡಿಸಿಕೊಂಡು ಉತ್ತಮವಾದ ಜೀವನ ನೆಡೆಸಬೇಕು, ಕಾರಣ ಕಂದಗಲ್ಲ ಹಾಗೂ ಸುತ್ತಮುತ್ತಲಿನ ಎಲ್ಲ ಭಕ್ತರು ಈ ಭಕ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಆಶೀರ್ವಚನ ನೀಡಿದರು.
ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಹಮ್ಮದಸಾಬ ಭಾವಿಕಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಸಭೆಯಲ್ಲಿ ಮಕ್ಕಳು ಮಹಿಳೆಯರು ಯುವಕರು ಹಿರಿಯರು ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.

ವರದಿ: ದಾವಲ್ ಶೇಡಂ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತಕಳಸಕೊಪ್ಪ ಸೇರಿದಂತೆ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ: ಜೆ ಟಿ ಪಾಟೀಲಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಕೋಟಿ ಕೋಟಿ ಹಣ ವಂಚನೆ ಕೇಸ್ : ಶಿವಾನಂದ ನೀಲಣ್ಣವರ ಇಡಿ ರೇಡ್ಹಾಡ ಹಾಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ ಆಗಸ್ಟ್ 15ವರೆಗೆ ಖಾತೆ ಹಂಚಿಕೆಗೆ ಕಾಲಾವಕಾಶ ಇದೆ : ಡಿ.ಕೆ.ಶಿವಕುಮಾರ್ಆಗಸ್ಟ್ 13 ರಂದು ಅಧಿವೇಶನ,14 ರಂದು ನೂತನ ಉಪಸಭಾಪತಿಗಳ ಆಯ್ಕೆ : ಡಿ.ಕೆ.ಶಿವಕುಮಾರ್ಹುತಾತ್ಮ ಯೋಧ ಅಂಗಡಿ ಮಂಜುನಾಥ ನಾಯಕ ಸಾದಾಪುರ ಪುಣ್ಯ ಸ್ಮರಣೆ​ಶ್ರೀ ಕ್ಷೇತ್ರ ಪರಕನಹಟ್ಟಿಯಿಂದ ಹುಬ್ಬಳ್ಳಿಗೆ ಪ್ರಥಮ ವರ್ಷದ ಸಿದ್ಧಾರೂಢ ಪಾದಯಾತ್ರೆ: ಭಕ್ತಿಪರವಶತೆಯಿಂದ ಚಾಲನೆಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ  : ಶಾಸಕ ಜಿ.ಹಂಪಯ್ಯ ನಾಯಕ ಸಾಹುಕಾರ