ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಉತ್ತರಾಧಿಕಾರಿಯಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಪ್ರಕಟಿಸಿದ್ದಾರೆ.
ಇಂದು ಬೆಳಿಗ್ಗೆ ಸಿಎಂ ನಿವಾಸದಲ್ಲಿ ನಡೆದ ಉಪಹಾರ ಸಭೆಯಲ್ಲಿ (ಬ್ರೇಕ್‌ಫಾಸ್ಟ್ ಮೀಟಿಂಗ್), ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.ಸಿಎಂ ಅವರ ಈ ಪ್ರಸ್ತಾವನೆಗೆ ಸಭೆಯಲ್ಲಿದ್ದ ಎಲ್ಲಾ ಸಚಿವರು ಒಮ್ಮತದಿಂದ ಸಮ್ಮತಿ ಸೂಚಿಸಿದ್ದಾರೆ.

