Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಶೋದಾ ಮತ್ತು ಕೃಷ್ಣ ಎಂಬ ತೈಲಚಿತ್ರ ಬರೋಬ್ಬರಿ 167.2 ಕೋಟಿ ರೂ.ಗೆ ಮಾರಾಟ

Advertisement
ನವದೆಹಲಿ: ಖ್ಯಾತ ಚಿತ್ರಕಲಾವಿದ ರಾಜಾ ರವಿವರ್ಮ ಅವರ ಕುಂಚದಲ್ಲಿ ಅರಳಿದ ಅಮೂಲ್ಯ ಕಲಾಕೃತಿಯೊಂದುಈಗ ವಿಶ್ವಮಟ್ಟದಲ್ಲಿ ಹೊಸ ದಾಖಲೆ ಬರೆದಿದೆ.

ಮುಂಬೈನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಅವರ 'ಯಶೋದಾ ಮತ್ತು ಕೃಷ್ಣ ಎಂಬ ತೈಲಚಿತ್ರ ಬರೋಬ್ಬರಿ 167.2 ಕೋಟಿ ರೂ.ಗೆ ಮಾರಾಟವಾಗುವ ಮೂಲಕ ಭಾರತೀಯ ಕಲಾ ಲೋಕದಲ್ಲಿ ಅಚ್ಚರಿ ಮೂಡಿಸಿದೆ.

ಭಾರತೀಯ ಕಲಾ ಇತಿಹಾಸದಲ್ಲೇ ಇಷ್ಟು ದೊಡ್ಡ ಮೊತ್ತಕ್ಕೆ ಹರಾಜಾದ ಅತ್ಯಂತ ದುಬಾರಿ ಚಿತ್ರ ಎಂಬ ಹೆಗ್ಗಳಿಕೆಗೆ ಈ ಕಲಾಕೃತಿ ಪಾತ್ರವಾಗಿದೆ. ಸಫ್ರಾನ್ ಆರ್ಟ್ ಸಂಸ್ಥೆಯು ಆಯೋಜಿಸಿದ್ದ ಈ ಹರಾಜಿನಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿತ್ತು.

ಅಂತಿಮವಾಗಿ ಪ್ರಸಿದ್ಧ ಉದ್ಯಮಿ ಹಾಗೂ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಂಸ್ಥಾಪಕ ಸೈರಸ್ ಪೂನಾವಾಲಾ ಅವರು ಈ ಅದ್ಭುತ ಚಿತ್ರವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಖರೀದಿಸಿದ ಬಳಿಕ ಸೈರಸ್ ಪೂನಾವಾಲಾ ಅವರು ಮಾಹಿತಿ ಹಂಚಿಕೊಂಡಿದ್ದು, ಇದನ್ನು ಖರೀದಿಸುವುದು ಹಕ್ಕು ಹಾಗೂ ಒಂದು ಜವಾಬ್ದಾರಿಯೂ ಹೌದು. ಇದು ಕೇವಲಕ್ಕೆ ಚಿತ್ರಕಲೆಯಲ್ಲ. ರಾಷ್ಟ್ರೀಯ ಸಂಪತ್ತು. ಹಾಗಾಗಿ ಸಾರ್ವಜನಿಕ ವೀಕ್ಷಣೆಗೆ ಇದು ಲಭ್ಯವಾಗಬೇಕು. ಜನರಿಗೆ ನೋಡಲು ಸಿಗುವಂತೆ ನನ್ನ ಕೈಲಾದಷ್ಟು ನಾನು ಪ್ರಯತ್ನಿಸುತ್ತೇನೆ ಎಂದಿದ್ದಾರೆ.

1848ರಲ್ಲಿ ತಿರುವಾಂಕೂರು ರಾಜಪ್ರಭುತ್ವದ ಶ್ರೀಮಂತ ಕುಟುಂಬದಲ್ಲಿ ರಾಜ ರವಿವರ್ಮ ಜನಿಸಿದರು. ಯುರೋಪಿಯನ್ ತೈಲವನ್ನು ಬಳಸಿ ವರ್ಣಚಿತ್ರಗಳನ್ನು ರಚಿಸುತ್ತಿದ್ದರು. ಭಾರತೀಯ ಚಿತ್ರಕಲೆಗೆ ಆಧುನಿಕ ಸ್ಪರ್ಶ ನೀಡಿದ ರಾಜಾ ರವಿವರ್ಮ ಅವರು, ಪುರಾಣದ ಕಥೆಗಳನ್ನು ಕಣ್ಣಿಗೆ ಕಟ್ಟುವಂತೆ ಚಿತ್ರಿಸುತ್ತಿದ್ದರು.

1890ರ ದಶಕದಲ್ಲಿ ರಚಿಸಿದ ಈ ಕಲಾಕೃತಿಯಲ್ಲಿ ತಾಯಿ ಯಶೋದೆಯು ಬಾಲಕೃಷ್ಣನನ್ನು ಪ್ರೀತಿಯಿಂದ ಅಪ್ಪಿಕೊಂಡಿರುವ ದೃಶ್ಯವು ಅತ್ಯಂತ ಮನಮೋಹಕವಾಗಿ ಮೂಡಿಬಂದಿದೆ. ಮಾನವೀಯ ಸಂಬಂಧಗಳು ಮತ್ತು ದೈವಿಕತೆಯನ್ನು ಮೇಳೈಸಿದ ಈ ಚಿತ್ರವು ದಶಕಗಳಿಂದ ಕಲಾ ಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿತ್ತು.

ಇದು ಕೇವಲ ಒಂದು ಚಿತ್ರವಾಗಿರದೆ, ಭಾರತೀಯ ಪರಂಪರೆಯನ್ನು ಎತ್ತಿ ಹಿಡಿಯುವ ಇಂತಹ ಕಲಾಕೃತಿಗಳು ಇಂದು ಜಾಗತಿಕ ಮಾರುಕಟ್ಟೆಯಲ್ಲಿ ಕೋಟಿ ಕೋಟಿ ಬೆಲೆ ಪಡೆಯುತ್ತಿರುವುದು ನಮ್ಮ ದೇಶದ ಕಲೆಗೆ ಸಿಕ್ಕ ದೊಡ್ಡ ಗೌರವವಾಗಿದೆ. ಈ ಹಿಂದೆ ಕೂಡ ಅನೇಕ ಚಿತ್ರಗಳು ದಾಖಲೆ ಬೆಲೆಗೆ ಮಾರಾಟವಾಗಿದ್ದರೂ, ರವಿವರ್ಮ ಅವರ ಈ ಕೃತಿ ಆ ಎಲ್ಲಾ ಹಳೆಯ ದಾಖಲೆಗಳನ್ನು ಮುರಿದು ಹೊಸ ಇತಿಹಾಸ ಸೃಷ್ಟಿಸಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ