Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊಟೇಲ್ ನಲ್ಲಿ ಬಿಲ್ ಪಾವತಿಸುತ್ತಿದ್ದಂತೆಯೇ ವ್ಯಕ್ತಿ ಸಾವು

Advertisement
ರಾಜಸ್ಥಾನದ ರಾಜಸಮಂದ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಹೊಟೇಲ್‌ನಲ್ಲಿ ಊಟ ಮಾಡಿ ಬಿಲ್ ಪಾವತಿಸುತ್ತಿದ್ದಂತೆ ಕೊನೆಯುಸಿರೆಳೆದಿದ್ದಾರೆ. ಈ ಆಘಾತಕಾರಿ ದೃಶ್ಯ ಅಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾವು ಯಾವಾಗ ಹೇಗೆ ಬರುತ್ತದೆ ಎಂದು ಯಾರಿಗೂ ಹೇಳಲಾಗದು. ಇತ್ತೀಚೆಗಂತೂ ಹೃದಯಾಘಾತದಿಂದಾಗಿ ಅನೇಕರು ಹಠಾತ್ ಆಗಿ ಸಾವನ್ನಪ್ಪುತ್ತಿದ್ದಾರೆ. ದೊಡ್ಡವರು ಚಿಕ್ಕವರು, ಶಾಲೆಗೆ ಹೋಗುವ ಮಕ್ಕಳು, ಮಧ್ಯವಯಸ್ಕರು ಎಂಬ ಯಾವ ಬೇಧವನ್ನು ತೋರದೇ ಸಾವು ಹೃದಯಾಘಾತದ ರೂಪದಲ್ಲಿ ಬಂದು ಅನೇಕರನ್ನು ಈಗಾಗಲೇ ಜವರಾಯನ ಪಾದ ಸೇರಿಸಿದೆ. ಜಿಮ್ ಮಾಡುತ್ತಿರುವಾಗ, ನಡೆದು ಹೋಗುವಾಗ, ಶಾಲೆಯಲ್ಲಿ ಆಟವಾಡುವಾಗ ಹೀಗೆ ಸಮಯ ಸಂದರ್ಭದ ಎಣಿಕೆ ಇಲ್ಲದೇ ಈಗಾಗಲೇ ಹಲವು ಎಳೆ ಜೀವಗಳು ಹೃದಯಾಘಾತದಿಂದಾಗಿ ಯಮನ ಪಾದ ಸೇರಿದ್ದಾರೆ. ಇಂತಹದ್ದೇ ಮತ್ತೊಂದು ಘಟನೆ ಈಗ ರಾಜಸ್ಥಾನದಲ್ಲಿ ನಡೆದಿದ್ದು, ಅದರ ವೀಡಿಯೋ ವೈರಲ್ ಆಗಿದೆ.

ಬಿಲ್ ಪಾವತಿಸುತ್ತಿದ್ದಂತೆ ಸಾವು: ರಾಜಸ್ಥಾನದ ರಾಜಸಮಂದ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಹೊಟೇಲ್‌ನಲ್ಲಿ ಊಟ ಮಾಡಿ ಬಿಲ್ ಪಾವತಿಸುತ್ತಿದ್ದಂತೆ ಕೊನೆಯುಸಿರೆಳೆದಿದ್ದಾರೆ. ಈ ಆಘಾತಕಾರಿ ದೃಶ್ಯ ಅಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ಆದ ವೀಡಿಯೋದಲ್ಲಿ ಕಾಣಿಸುವಂತೆ ಯುವಕನೋರ್ವ ರೆಸ್ಟೋರೆಂಟ್‌ನ ಬಿಲ್ ಕೌಂಟರ್ ಮುಂದೆ ಬಿಲ್ ಪಾವತಿಸಲು ನಿಂತಿದ್ದಾನೆ. ಅಲ್ಲಿ ಆತ ಊಟವಾದ ನಂತರ ಹೊಟೇಲ್‌ಗಳಲ್ಲಿ ನೀಡುವ ಬಡೆಸೊಪ್ಪು ಅಥವಾ ಸೋಂಪು ಎಂದು ಕರೆಯುವ ಪದಾರ್ಥವನ್ನು ಒಂದು ಚಮಚದಲ್ಲಿ ತೆಗೆದುಕೊಂಡು ಬಾಯಿಗೆ ಹಾಕಿಕೊಂಡಿದ್ದಾನೆ. ನಂತರ ಕ್ಯಾಷಿಯರ್ ಆತನಿಗೆ ಬಿಲ್ ನೀಡಿದ್ದಾರೆ. ಅಷ್ಟೇ.. ಕ್ಷಣದಲ್ಲೇ ಆತ ಕುಸಿದು ನೆಲಕ್ಕೆ ಬಿದ್ದಿದ್ದು, ಅಲ್ಲೇ ಉಸಿರು ಚೆಲ್ಲಿದ್ದಾನೆ. ಹೃದಯಾಘಾತದಿಂದ ಆತನ ಸಾವು ಸಂಭವಿಸಿದೆ ಎಂದು ವರದಿಯಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ