LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕರ್ನಾಟಕ ರಾಜ್ಯ ಸರ್ಕಾರದ ಹೊಸ ಶಿಕ್ಷಣ ನೀತಿಯಂತೆ ರಚಿಸಲಾದ್ B.Sc ಪದವಿಯ ಗಣಿತ ಪಠ್ಯಪುಸ್ತಕದ ಬಿಡುಗಡೆ

Advertisement
ಬೀದರ್: ಕರ್ನಾಟಕ ಸರ್ಕಾರದ ಹೊಸ ರಾಜ್ಯ ಶಿಕ್ಷಣ ನೀತಿ (State Education Policy - SEP) ಅನ್ವಯ, ಬೀದರ್ ಮತ್ತು ಗುಲಬರ್ಗಾ ವಿಶ್ವವಿದ್ಯಾಲಯಗಳಿಗೆ ಸಂಯೋಜಿತವಾಗಿರುವ ವಿವಿಧ ಪದವಿ ಕಾಲೇಜುಗಳಿಗೆ ಮೀಸಲಾದ B.Sc ಪದವಿಯ ಸಾಮಾನ್ಯ ಗಣಿತದ ಪಠ್ಯಪುಸ್ತಕವನ್ನು ಬಿಡುಗಡೆ ಮಾಡಲಾಯಿತು.



ಈ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ, ವಿವಿಧ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಗಣಿತ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು. ಡಾ. ಮಲ್ಲಿಕಾರ್ಜುನ ಹಂಗರಗಿ (ಪ್ರಾಂಶುಪಾಲರು, ಕರ್ನಾಟಕ, ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು, ಬೀದರ್), ಪ್ರೊ. ಧನರಾಜ್ ಬಿರಾದಾರ್ (ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮನ್ನಾಳಿ), ಡಾ. ಹೇಮಾವತಿ ಪಾಟೀಲ (ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಭಾಲ್ಕಿ) ಹಾಗೂ ಡಾ. ಚನ್ನಕೇಶವ ಮೂರ್ತಿ (ಗಣಿತ ವಿಭಾಗ ಮುಖ್ಯಸ್ಥರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ನೌಬಾದ್, ಬೀದರ್) ಇವ್ರು ಈ ಪುಸ್ತಕವನ್ನು ಬಿಡುಗಡೆ ಮಾಡಿದರು.

ಈ ಪಠ್ಯಪುಸ್ತಕವನ್ನು ಡಾ. ಸಿದ್ದನಗೌಡ ಪಾಟೀಲ (ಕಲಬುರ್ಗಿ), ಡಾ. ಜಗದೀಶ್ ತವಡೆ (ಡೋಣಗಾಪುರ, ಭಾಲ್ಕಿ) ಮತ್ತು ಡಾ. ಪದ್ಮಿನಿ ಕಾಜಿ (ಬೀದರ್) ಅವರು ಸಹಲೆಖಕರಾಗಿ ರಚಿಸಿದ್ದಾರೆ. ಹೊಸ ರಾಜ್ಯ ಶಿಕ್ಷಣ ನೀತಿಯ ಅನ್ವಯ ತರಬೇತಿಯ ಸಹಾಯಕ್ಕೆ ವಿನ್ಯಾಸಗೊಳಿಸಿದ ಈ ಪುಸ್ತಕವು ವಿದ್ಯಾರ್ಥಿಗಳಿಗೆ ಆಳವಾದ ವಿಷಯ ಜ್ಞಾನವನ್ನು ನೀಡಲಿದ್ದು, ಶೈಕ್ಷಣಿಕ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸುವಲ್ಲಿ ಸಹಕಾರಿಯಾಗುವುದಾಗಿದೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಲೇಜಿನ ಇತರ ಅಧ್ಯಾಪಕರು ಮತ್ತು ಆಡಳಿತ ಮಂಡಳಿಯ ಸದಸ್ಯರು ಲೇಖಕರ ಈ ಪ್ರಯತ್ನಕ್ಕೆ ಅಭಿನಂದನೆ ಯನ್ನ ಸಲ್ಲಿಸಿ, ಪುಸ್ತಕದ ಯಶಸ್ವಿಗೆ ಶುಭ ಹಾರೈಸಿದರು.

ವರದಿ: ಸಂತೋಷ ಬಿಜಿ ಪಾಟೀಲ  
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ