ಬೆಂಗಳೂರು: ಮನೆಯ ಮೇಲ್ಚಾವಣಿ ಕುಸಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಕಂಕನಾಡಿ ಪ್ರದೇಶದಲ್ಲಿ ನಡೆದಿದೆ.
ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಒಬ್ಬ ಮಹಿಳೆ ಮತ್ತು ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಮೂವರನ್ನು ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಯ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಮನೆಯ ಹಿಂಬದಿ ತಡೆಗೋಡೆ, ಮೇಲ್ಚಾವಣಿ ಕುಸಿದು ದುರಂತ ಸಂಭವಿಸಿದೆ. ಮುಂಜಾನೆ ನಿದ್ದೆಯ ಮಂಪರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ.


