Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಪತ್ತೆಯಾಗಿದ್ದ ವಿಜ್ಞಾನಿ ನದಿಯಲ್ಲಿ ಶವವಾಗಿ ಪತ್ತೆ

Advertisement
 ಮಂಡ್ಯನಾಪತ್ತೆಯಾಗಿದ್ದ ಖ್ಯಾತ ಕೃಷಿ ವಿಜ್ಞಾನಿ, ಪದ್ಮಶ್ರೀ ಪುರಸ್ಕೃತ ಡಾ.ಸುಬ್ಬಣ್ಣ ಅಯ್ಯಪ್ಪನ್ (70) ಅವರು ಜಿಲ್ಲೆಯ ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಬಳಿ ಕಾವೇರಿ‌ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮೈಸೂರಿನ ವಿಶ್ವೇಶ್ವರ ನಗರ ಕೈಗಾರಿಕಾ ಪ್ರದೇಶದ ಅಕ್ಕಮಹಾದೇವಿ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ ಒಂದರಲ್ಲಿ ಪತ್ನಿ ಜೊತೆಗೆ ವಾಸವಾಗಿದ್ದ ಡಾ.ಸುಬ್ಬಣ್ಣ ಅಯ್ಯಪ್ಪನ್ ಮೇ 7ರಂದು ಮನೆಯಿಂದ ನಾಪತ್ತೆಯಾಗಿದ್ದರು. ಅವರು ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಸದ್ಯ ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಶನಿವಾರ ಸಂಜೆ ನದಿಯಲ್ಲಿ ಅಪರಿಚಿತ ಶವ ಕಂಡ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ. ಸ್ಥಳಕ್ಕೆ ಬಂದು ಮೃತದೇಹವನ್ನು ನದಿಯಿಂದ ಹೊರೆತೆಗೆದು ನೋಡಿದಾಗ ವಿಜ್ಞಾನಿಯ ಗುರುತು ಪತ್ತೆ ಆಗಿದೆ. ನದಿ ದಡದಲ್ಲಿ ಅಯ್ಯಪ್ಪನ್ ಅವರ ಸ್ಕೂಟರ್​ ಪತ್ತೆಯಾಗಿದೆ. ಮೂರು ದಿನಗಳ ಹಿಂದೆ ಸುಬ್ಬಣ್ಣ ಅವರು​ ಮನೆಯಿಂದ ಹೊರಗೆ ಹೋದವರು ವಾಪಸ್ಸಾಗಿರಲಿಲ್ಲ. ಹೀಗಾಗಿ, ಕುಟುಂಬಸ್ಥರು ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಮೂರು ದಿನಗಳ ಹಿಂದೆ ಶ್ರೀರಂಗಪಟ್ಟಣದ ಸಾಯಿಬಾಬಾ ಆಶ್ರಮದ ಬಳಿ ನದಿಗೆ ಹಾರಿದ್ದಾರೆ ಎಂಬುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂ ಇವರ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸ್​ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

"ಸುಬ್ಬಣ್ಣ ಅಯ್ಯಪ್ಪನ್ ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮಕ್ಕೆ ಮತ್ತು ಶ್ರೀರಂಗಪಟ್ಟಣದ ಕಾವೇರಿ ನದಿಯ ದಡಕ್ಕೆ ಧ್ಯಾನಕ್ಕಾಗಿ ಹೋಗುತ್ತಿದ್ದರು. ದುರದೃಷ್ಟವಶಾತ್, ಅವರ ದೇಹ ನದಿಯಲ್ಲಿ ಪತ್ತೆಯಾಗಿದೆ" ಎಂದು ಸಂಬಂಧಿ ಮತ್ತು ವಕೀಲ ಶ್ರೀನಿಧಿ ಎಂಬವರು ಹೇಳಿದ್ದಾರೆ.

1955 ಡಿಸೆಂಬರ್ 10ರಂದು ಚಾಮರಾಜನಗರ ಜಿಲ್ಲೆಯ ಯಳಂದೂರಿನಲ್ಲಿ ಡಾ.ಸುಬ್ಬಣ್ಣ ಅಯ್ಯಪ್ಪನ್ ಅವರು ಜನಿಸಿದ್ದರು. 1975ರಲ್ಲಿ ಮಂಗಳೂರಿನಲ್ಲಿ ಮೀನುಗಾರಿಕೆ ವಿಜ್ಞಾನದಲ್ಲಿ ಪದವಿ (BFSc) ಮತ್ತು 1977ರಲ್ಲಿ ಮೀನುಗಾರಿಕೆ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ (MFSc) ಪಡೆದಿದ್ದರು. 1998ರಲ್ಲಿ ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪಡೆದುಕೊಂಡಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ