Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್‌ಐಆರ್ ಪ್ರಕ್ರಿಯೆ ನಮ್ಮ ಅಡ್ಡಿಯಿಲ್ಲ : ಡಿ. ಕೆ ಶಿವಕುಮಾರ್ 

Advertisement

ಬೆಂಗಳೂರು: "ಎಸ್‌ಐಆರ್ ಪ್ರಕ್ರಿಯೆಗೆ ನಮ್ಮ ವಿರೋಧವಿದ್ದರೂ ಜನರ ಮತದಾನದ ಹಕ್ಕು ರಕ್ಷಣೆಗಾಗಿ ನಮ್ಮ ಸರ್ಕಾರ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ.

ಇದು ಚುನಾವಣಾ ಆಯೋಗದ ಪ್ರಕ್ರಿಯೆಯಾಗಿದ್ದು, ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ಆದರೆ ಬಡವರು ಹಾಗೂ ಅಲ್ಪಸಂಖ್ಯಾತರ ಮತದಾನದ ಹಕ್ಕು ಕಸಿಯುವುದು ವಿರೋಧ ಪಕ್ಷಗಳ ಕುತಂತ್ರ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿರುಗೇಟು ನೀಡಿದರು.

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ನಮ್ಮಂತೆ ಬೇರೆ ಯಾವುದೇ ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಹಕಾರ ನೀಡಿಲ್ಲ

ಎಸ್ ಐಆರ್ ವಿಚಾರವಾಗಿ ಕುಮಾರಸ್ವಾಮಿ ಹಾಗೂ ಪ್ರಹ್ಲಾದ್ ಜೋಷಿ ಅವರು ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿರುವ ಬಗ್ಗೆ ಕೇಳಿದಾಗ, "ಎಸ್‌ಐಆರ್ ವಿಚಾರದಲ್ಲಿ ನಮ್ಮದೇ ಆದ ಭಿನ್ನಾಭಿಪ್ರಾಯವಿದೆ. 

ನಾವು ಕೋರ್ಟ್ ನಲ್ಲಿ ನಮ್ಮ ವಾದ ಸಲ್ಲಿಸಿದ್ದು, ನ್ಯಾಯಾಲಯ ಈ ವಿಚಾರವಾಗಿ ತೀರ್ಪು ನೀಡಿದ್ದಾರೆ. ಈ ಪ್ರಕ್ರಿಯೆ ವೇಳಾಪಟ್ಟಿ ಬಗ್ಗೆ ನಮಗೆ ಅಸಮಾಧಾನವಿದ್ದು, ಅದರ ವಿರುದ್ಧವೂ ಕೋರ್ಟ್ ಮೊರೆ ಹೋಗುತ್ತೇವೆ.

ನಾವು ಎಲ್ಲರಿಗೂ ಮತದಾನದ ಹಕ್ಕು ರಕ್ಷಣೆ ಮಾಡಬೇಕು ಎಂದು ನಮ್ಮ ಸರ್ಕಾರ ಚುನಾವಣಾ ಆಯೋಗದ ಜೊತೆ ಕೈ ಜೋಡಿಸಿದೆ. 

ನಮ್ಮಂತೆ ಬೇರೆ ಯಾವುದೇ ರಾಜ್ಯದಲ್ಲಿ ಈ ರೀತಿ ಸಹಕಾರ ನೀಡಿಲ್ಲ. ನಿಮ್ಮ ಮತದಾನದ ಹಕ್ಕು, ಬದುಕಿನ ಹಕ್ಕು ಎಂದು ಹೇಳುವ ಮೂಲಕ ಜನರಿಗೆ ಮತದಾನದ ಹಕ್ಕು ಉಳಿಸಿಕೊಳ್ಳಲು ಸರ್ಕಾರ ಜಾಗೃತಿ ಮೂಡಿಸುತ್ತಿದ್ದೇವೆ" ಎಂದು ವಿವರಿಸಿದರು.

ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದನ್ನು ನೋಡಿ ವಿರೋಧ ಪಕ್ಷಗಳಿಗೆ ಭಯ

"ಎಲ್ಲಾ ಪಕ್ಷದವರು ಬಿಎಲ್‌ಎ2 ನೇಮಕ ಮಾಡಲು ಚುನಾವಣಾ ಆಯೋಗವೇ ಅವಕಾಶ ನೀಡಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜನತಾದಳದವರು ಬಿಎಲ್‌ಎ ನೇಮಕ ಮಾಡಿದ್ದಾರೆ. ಸಂಘ ಸಂಸ್ಥೆಗಳು ನೆರವು ನೀಡಲು ಅವಕಾಶ ಕಲ್ಪಿಸಲಾಗಿದೆ. 

ಅಧಿಕಾರಿಗಳು ತಮಗೆ ಆಯೋಗದಿಂದ ಬಂದಿರುವ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸುತ್ತಿದ್ದಾರೆ.

ಸರ್ಕಾರ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದನ್ನು ನೋಡಿ ವಿರೋಧ ಪಕ್ಷಗಳಿಗೆ ಭಯ ಶುರುವಾಗಿದೆ. ಚುನಾವಣಾ ಆಯೋಗದ ಮೇಲೆ ಅವರಿಗೇ ನಂಬಿಕೆ ಇಲ್ಲ ಎಂದು ಅವರು ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ರದ್ದು ಮಾಡಲು ಹೇಳುತ್ತಿದ್ದಾರೆ. ಇದು ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ" ಎಂದು ತಿಳಿಸಿದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಲವಾರು ಬದಲಾವಣೆಗಳೊಂದಿಗೆ ಭಾರತ ತಂಡ ಪ್ರಕಟಎಸ್‌ಐಆರ್ ಪ್ರಕ್ರಿಯೆ ನಮ್ಮ ಅಡ್ಡಿಯಿಲ್ಲ : ಡಿ. ಕೆ ಶಿವಕುಮಾರ್ ಖಮೇನಿ ಅಂತಿಮಯಾತ್ರೆ : 3 ಸಾವಿರ ಸಮಾಧಿ ನಿರ್ಮಿಸಿದ ಇರಾನ್ ಸರ್ಕಾರ ಕರ್ನಾಟಕದಲ್ಲಿ 56 ಸಾವಿರ ಜನರಿಗೆ ಹರಡಿದೆ ಎಚ್ ಐವಿ : ಆರೋಗ್ಯ ಇಲಾಖೆ ಹೈ ಅಲರ್ಟ್ಬರಗಾಲ ಎದುರಿಸಲು ಸರ್ಕಾರ ತಯಾರಿ ಮಾಡಿಕೊಳ್ಳುತ್ತಿದ್ದೆ : ಜಿ. ಪರಮೇಶ್ವರ್ ರಾಜ್ಯದಲ್ಲಿ ರದ್ದಾಗಿದ್ದ ಬಿಪಿಎಲ್ ಕಾರ್ಡ್ ಗೆ ಮತ್ತೆ ಅರ್ಜಿ ಸಲ್ಲಿಕೆ ಆರಂಭ RSS ಪಥಸಂಚಲನಕ್ಕೆ ಇನ್ಮುಂದೆ ಸರ್ಕಾರದ ಅನುಮತಿ ಕಡ್ಡಾಯ : ಪ್ರಿಯಾಂಕ್ ಖರ್ಗೆಸರ್ಕಾರಿ ಶಾಲೆಯ ಗೇಟ್ ಬಿದ್ದು ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ ಶಿರಗೂರಿನಲ್ಲಿ  ಲಕ್ಷ್ಮೀದೇವಿ ಜಾತ್ರೆ ಮಹೋತ್ಸವಬಿಎಲ್‌ಒಗಳ ಕಾರ್ಯಕ್ಕೆ ಸಹಕರಿಸಲು ಜಮಖಂಡಿ ತಹಶೀಲ್ದಾ‌ರ್ ಅನಿಲ್‌ ಬಡಿಗೇರ ಮನವಿ