ಉಡುಪಿ : ಹೆತ್ತ ತಂದೆ-ತಾಯಿಯನ್ನೇ ಮಗನೊಬ್ಬ ಅತ್ಯಂತ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿ ಗ್ರಾಮದ ಗಾಂಧಿನಗರದಲ್ಲಿ ನಡೆದಿದೆ.
ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ (55) ಹಾಗೂ ಅವರ ಪತ್ನಿ ಸಂಶದ್ ಬೇಗಂ (50) ಕೊಲೆಯಾದ ದಂಪತಿ.ಇವರನ್ನು ಹತ್ಯೆಗೈದ ಆರೋಪದಡಿ ಪುತ್ರ ಶಾಹಿದ್ ಅಲಿ (31) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮನೆಯಲ್ಲಿ ಉಂಟಾದ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆರೋಪಿ ಶಾಹಿದ್ ಅಲಿ ತನ್ನ ತಂದೆ-ತಾಯಿಯ ಮೇಲೆ ಸುತ್ತಿಗೆಯಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ಗಂಭೀರ ರಕ್ತಸ್ರಾವ ಹಾಗೂ ತಲೆಗೆ ಬಿದ್ದ ಬಲವಾದ ಏಟಿನಿಂದಾಗಿ ದಂಪತಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.


