LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ನೆಟ್‌ವರ್ಕ್ ಸಿಗಲಿಲ್ಲವೆಂದು ಜಿಯೋ ಸಿಬ್ಬಂದಿಯನ್ನ ಕಂಬಕ್ಕೆ ಕಟ್ಟಿದ ಗ್ರಾಮಸ್ಥರು 

Advertisement

ಉತ್ತರ ಪ್ರದೇಶ: ಮೊಬೈಲ್‌ನಲ್ಲಿ ನೆಟ್‌ವರ್ಕ್ ಸಿಗುತ್ತಿಲ್ಲ, ಕರೆಗಳು ಸರಿಯಾಗಿ ಸಂಪರ್ಕಗೊಳ್ಳುತ್ತಿಲ್ಲ ಅಥವಾ ಇಂಟರ್ನೆಟ್ ವೇಗ ಕಡಿಮೆಯಾಗಿದೆ ಎಂದು ಕಂಪನಿಯ ಕಸ್ಟಮರ್ ಕೇರ್‌ಗೆ ಕರೆ ಮಾಡಿ ದೂರು ನೀಡುವುದನ್ನು ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕುವುದನ್ನು ನಾವು ನೋಡಿದ್ದೇವೆ.

ಆದರೆ, 5G ನೆಟ್‌ವರ್ಕ್ ಸಿಗುತ್ತಿಲ್ಲ ಎಂಬ ಸಿಟ್ಟಿಗೆ ಗ್ರಾಮಸ್ಥರೆಲ್ಲರೂ ಸೇರಿ ಟೆಲಿಕಾಂ ಕಂಪನಿಯ ನೌಕರನೊಬ್ಬನನ್ನು ಟವರ್ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ವಿಚಿತ್ರ ಮತ್ತು ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ನಡೆದಿದೆ.

ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯ ಗ್ರಾಮವೊಂದರಲ್ಲಿ ರಿಲಯನ್ಸ್ ಜಿಯೋ (Jio) ಕಂಪನಿಯ 5G ಸೇವೆ ಕಳೆದ ಕೆಲವು ದಿನಗಳಿಂದ ತೀವ್ರ ತಾಂತ್ರಿಕ ತೊಂದರೆಗೊಳಗಾಗಿತ್ತು.

ಗ್ರಾಮಸ್ಥರು ದಿನನಿತ್ಯದ ಕರೆಗಳಿಗೆ, ಆನ್‌ಲೈನ್ ಪಾವತಿಗಳಿಗೆ ಹಾಗೂ ನೆಟ್‌ವರ್ಕ್ ಆಧಾರಿತ ಕೆಲಸಗಳಿಗೆ ತೀವ್ರ ತೊಂದರೆ ಅನುಭವಿಸುತ್ತಿದ್ದರು. ಹಲವು ಬಾರಿ ಕಂಪನಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ.

ಇದೇ ಸಂದರ್ಭದಲ್ಲಿ, ಜಿಯೋ ಕಂಪನಿಯ ತಾಂತ್ರಿಕ ಸಿಬ್ಬಂದಿಯೊಬ್ಬರು ಟವರ್‌ನ ರಿಪೇರಿ ಮತ್ತು ಪರಿಶೀಲನೆಗಾಗಿ ಗ್ರಾಮಕ್ಕೆ ಆಗಮಿಸಿದ್ದರು. ಇದನ್ನು ಗಮನಿಸಿದ ಸ್ಥಳೀಯ ಯುವಕರು ಹಾಗೂ ನೆಟ್ಟಿಗರು, ಸಿಬ್ಬಂದಿಯನ್ನು ಸುತ್ತುವರೆದು ನೆಟ್‌ವರ್ಕ್ ಸಮಸ್ಯೆಯ ಕುರಿತು ತೀವ್ರ ತರಾಟೆಗೆ ತೆಗೆದುಕೊಂಡರು. ಮಾತಿಗೆ ಮಾತು ಬೆಳೆದು, ಆಕ್ರೋಶಗೊಂಡ ಗ್ರಾಮಸ್ಥರು ಆ ಸಿಬ್ಬಂದಿಯನ್ನು ಸ್ಥಳದಲ್ಲೇ ಇದ್ದ ಟವರ್ ಕಂಬಕ್ಕೆ ಹಗ್ಗದಿಂದ ಬಿಗಿದು ಕಟ್ಟಿಹಾಕಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
SAD NEWS : ಬಾಲಿವುಡ್ ಹಿರಿಯ ನಟ 'ನಾನಾ ಪಾಟೇಕರ್' ಇನ್ನಿಲ್ಲ ಕೆನ್ಸೋ ಸೊಐ, ಹೆನ್ರಿ ಕಗಾನ್ ಗೆ, 2026ರ ರಸಾಯನಶಾಸ್ತ್ರ ನೊಬೆಲ್ ಪ್ರಶಸ್ತಿ ಎರಡು ದಿನಗಳಲ್ಲಿ ರೈತರ ಖಾತೆಗೆ 2500 ರೂ. ಜಮಾ: ಡಾ. ಜಿ. ಪರಮೇಶ್ವರ್ಬೇರೆ ಕಡೆ ನೆಲೆಸಿದ್ದರೂ ವಂಶವೃಕ್ಷ ಸಿಗುತ್ತದೆ : ಹೈಕೋರ್ಟ್‌ ಇಂದು ಬೆಂಗಳೂರಿನಲ್ಲಿ ಸಿಜೆಪಿಯಿಂದ ಬೃಹತ್ ಪ್ರತಿಭಟನೆ: ಧ್ರುವ್ ರಾಠಿ, ಪ್ರಕಾಶ್ ರಾಜ್ ಭಾಗಿವಿಧಾನಸಭೆ ಕಲಾಪದ ಅಣುಕು ಪ್ರದರ್ಶನ ಗಮನ ಸೆಳೆಯಲಿರುವ ವಿದ್ಯಾರ್ಥಿಗಳ ಯುವ ಸಂಸತ್ತುಜಿಪಂ ಚುನಾವಣೆ : 1129 ಜಿಲ್ಲಾ ಪಂಚಾಯತಿ ಸ್ಥಾನಗಳಿಗೆ ಮೀಸಲಾತಿ ಅಧಿಸೂಚನೆ ಪ್ರಕಟ ರಾಜ್ಯಾಧ್ಯಂತ 'ಹಾಫ್ ಹೆಲ್ಮೆಟ್‌'ಗೆ ಸಂಪೂರ್ಣ ನಿಷೇಧ: ಉಲ್ಲಂಘಿಸಿದರೇ ದಂಡ ಫಿಕ್ಸ್! ಮುಂದಿನ ವಾರ ಏಕದಿನ ತಂಡದ ಆಯ್ಕೆ ಸಾಧ್ಯತೆ ರಣಜಿ ತಂಡದಿಂದಲೂ ಸೂರ್ಯಕುಮಾರ್ ಗೆ ಕೊಕ್