LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಡಿ.ಕೆ.ಶಿವಕುಮಾರ್ 

Advertisement

ಬೆಂಗಳೂರು : "ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ. ನಾನು ಏಳನೇ ತರಗತಿಯಿಂದ ಶಾಸಕನಾಗುವವರೆಗೂ ಅನೇಕ ಅಡಚಣೆಗಳನ್ನು ಎದುರಿಸಿ ಈಗ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿದ್ದೇನೆ. ಯುವಕರು ನಾಯಕರಾಗಲು ಮುಂದೆ ಬರಬೇಕು. ನಾಯಕನಾದವನು ನಾಯಕರನ್ನು ಸೃಷ್ಟಿಸಬೇಕು" ಎಂದು ಸಿಎಂ‌ ಡಿ ಕೆ ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಂಗಳವಾರ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

"ಏಳನೇ ತರಗತಿ ಶಾಲಾ ಚುನಾವಣೆ, ಕಾಲೇಜು ಚುನಾವಣೆಗಳಲ್ಲೂ ನನಗೆ ತಕ್ಕ ನ್ಯಾಯ ಸಿಗಲಿಲ್ಲ. ಆನಂತರವೂ ವಿದ್ಯಾರ್ಥಿ ಕಾಂಗ್ರೆಸ್ ಚುನಾವಣೆಯ ಟಿಕೆಟ್ ತಪ್ಪಿಸಲಾಯಿತು.

ಬಳಿಕ ಪದವಿ ಓದುವಾಗ ದೇವೇಗೌಡರ ವಿರುದ್ದ ಸ್ಪರ್ಧಿಸುವ ಅವಕಾಶ ದೊರೆಯಿತು. ಆ ಚುನಾವಣೆಯಲ್ಲಿ ಸೋತೆ. ನಂತರ ವಿಧಾನಸಭೆ ಚುನಾವಣೆ ಗೆಲುವು ಕಂಡೆ. ಅಲ್ಲಿಂದ ಇಲ್ಲಿಯವರೆಗೆ ಪ್ರಯಾಣ ಬೆಳೆಸಿದ್ದೇನೆ" ಎಂದು ಹೇಳಿದರು.

"ಎನ್ ಪಿಎಸ್ ಶಾಲೆಯಲ್ಲಿ ಓದುವಾಗ ತುಂಟ ಎಂಬ ಕಾರಣಕ್ಕೆ ಮುಂದಿನ ತರಗತಿಗಳಿಗೆ ಮುಂದುವರೆಯಲು ಅವಕಾಶ ನೀಡಲಿಲ್ಲ. ಇದಕ್ಕಾಗಿ ಕಾರ್ಮೆಲ್ ಶಾಲೆಗೆ ಸೇರಿಸಲಾಯಿತು. ಅಲ್ಲಿ ಏಳನೇ ತರಗತಿಯಲ್ಲಿ ಚುನಾವಣೆಗೆ ನಿಂತಿದ್ದೆ.

ನನ್ನ ಚಿನ್ಹೆ ನಕ್ಷತ್ರ. ನನಗೆ 80 ರಷ್ಟು ಮತಗಳು ಬಂದಿದ್ದರೂ ಶೇ. 20 ರಷ್ಟು ಮತ ಗಳಿಸಿದ್ದ ಸಹಪಾಠಿ ಆರತಿ ಎಂಬುವರನ್ನು ಶಾಲಾ ಕಾರ್ಯದರ್ಶಿಯನ್ನಾಗಿ ನೇಮಿಸಲಾಯಿತು. ನನಗೆ ಕ್ರೀಡಾ ಕಾರ್ಯದರ್ಶಿ ಹುದ್ದೆಯನ್ನು ಸೃಷ್ಟಿಸಿ ಕೊಟ್ಟರು" ಎಂದು ಹೇಳಿದರು.

"ವಿದ್ಯಾವರ್ಧಕ ಕಾಲೇಜು ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಿಲ್ಲ. ಆಗ ದೇಶಪಾಂಡೆ ಎನ್ನುವವರನ್ನು ಚುನಾವಣೆಗೆ ನಿಲ್ಲಿಸಿ ನಾನೇ ಭಾಷಣ ಮಾಡಿ ಗೆಲ್ಲಿಸಿದೆ. ಹೀಗೆ ನಾಯಕತ್ವ ಗುಣಗಳನ್ನು ಹೊಂದಿರುವವರಿಗೆ ಉಂಟಾಗುವ ಅಡಚಣೆಗಳ ಅನೇಕ" ಎಂದರು.

ಯುವ ಸಂಸತ್ತು ನಿರ್ಮಾಣ ಮಾಡುವ ಆಶಯ

"ಯುವ ಸಂಸತ್ತು ನಿರ್ಮಾಣ ಮಾಡುವ ಆಶಯದಿಂದ ಶಾಲಾ, ಕಾಲೇಜುಗಳಲ್ಲಿ ಮಾದರಿ ಸಂಸತ್ ನಡೆಸಲಾಗುವುದು. ಇದು ಬಸವಣ್ಣನವರ ಕಾಲದ ಅನುಭವ ಮಂಟಪದ ಚಿಂತನೆಗಳನ್ನು ಒಳಗೊಂಡಿದೆ. ವಿಶ್ವಕ್ಕೆ ಮೊದಲ ಸಂಸತ್ತು ಎಂದು ಖ್ಯಾತಿ ಪಡೆದಿರುವ ಅನುಭವ ಮಂಟಪದ ತಿಳುವಳಿಕೆ ಈ ಮೂಲಕ ನೀಡಲಾಗುವುದು" ಎಂದರು.

"ಜನಸೇವಕ ಎಂದು ನನ್ನನ್ನು ಜನ ಗುರುತಿಸಿದರು. ಅದೇ ರೀತಿ ವ್ಯವಸ್ಥೆಯಲ್ಲಿ ಹೊಸ ನಾಯಕತ್ವ ಬೆಳೆಯಬೇಕು. ಪ್ರಜಾಪ್ರಭುತ್ವದ ವ್ಯವಸ್ಥೆ ಯುವಕರಿಗೆ ತಿಳಿದಿರಬೇಕು. ಅದಕ್ಕಾಗಿಯೇ ಪ್ರತಿ ಕಾಲೇಜಿನಲ್ಲಿ ಶಿಸ್ತು ಬದ್ಧವಾಗಿ ಚುನಾವಣೆಗಳು ನಡೆಯಬೇಕೆಂದು ಘೋಷಿಸಲಾಗಿದೆ.

ಯಾರಲ್ಲಿ ಯಾವ ಕಿಡಿ ಇರುತ್ತದೆಯೋ ಗೊತ್ತಿಲ್ಲ. ಪ್ರತಿಯೊಬ್ಬರಿಗೂ ನಾಯಕತ್ವದ ಅವಕಾಶ ದೊರೆಯಬೇಕು. ದಿನೇ ದಿನೇ ಹೊಸ ಬೆಳವಣಿಗೆಗಳು ಯುವಪೀಳಿಗೆಯಲ್ಲಿ ಕಾಣುತ್ತಿದ್ದೇವೆ. ನಾಯಕರನ್ನು ಸೃಷ್ಟಿಸುವವನೇ ನಿಜವಾದ ನಾಯಕ" ಎಂದು ತಿಳಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಡಿ.ಕೆ.ಶಿವಕುಮಾರ್ ಮುಸ್ಲಿಂರ ಟೋಪಿ ಹಾಕಿದಕ್ಕೆ ತಲೆ ಬೋಳಿಸಿಕೊಂಡು, ಗಂಗಾ ನದಿಯಲ್ಲಿ ಸ್ನಾನ ಮಾಡಿದ್ದೇನೆ : ಶಾಸಕ ಯತ್ನಾಳ್ಸತೀಶ್ ಜಾರಕಿಹೊಳಿ ಮೇಲೆ ಇ.ಡಿ ದಾಳಿ : ಕಾಶಪ್ಪನವರ್ ಸ್ಫೋಟಕ ಹೇಳಿಕೆಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಒಂದು ಅಂಶವಿಲ್ಲ : ಡಿ.ಕೆ.ಶಿವಕುಮಾರ್ ಕಿಡಿರಮೇಶ್ ಜಾರಕಿಹೊಳಿ ಮುಗ್ಸಿದ್ರು, ಈಗ ಸತೀಶ್ ಜಾರಕಿಹೊಳಿ ಸರತಿ: ಕುಮಾರಸ್ವಾಮಿ ,ಮೊಹಸಿನ್ ನಕ್ವಿ ಯಾವುದೇ ಆಕ್ಷೇಪ ವ್ಯಕ್ತ ಪಡಿಸಿಲ್ಲ,ಕರ್ತವ್ಯಲೋಪ, ಸರ್ಕಾರಿ ಜಮೀನು ಅಕ್ರಮ ಖಾತೆ ಆರೋಪ: ಮಾಯಸಂದ್ರ ಕಂದಾಯ ನಿರೀಕ್ಷಕರ ವಜಾಕ್ಕೆ ರೈತ ಸಂಘ ಒತ್ತಾಯಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಸಚಿನ್ ದಾಖಲೆ ಅಳಿಸಿ ಹಾಕಿದ ಟೇಲರ್ RuPay ಬಳಕೆದಾರರಿಗೆ ಸಿಹಿ ಸುದ್ದಿ: ₹2,000 ವರೆಗಿನ ಡಿಜಿಟಲ್ ಪಾವತಿಗೆ ಯಾವುದೇ ಶುಲ್ಕವಿಲ್ಲ