Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸದ್ಯಕ್ಕೆ ಬಸ್ ಟಿಕೆಟ್ ದರ ಏರಿಕೆ ಇಲ್ಲ : ಸಚಿವ ರಾಮಲಿಂಗಾರೆಡ್ಡಿ 

Advertisement

ಬೆಂಗಳೂರು: ಪದೇ ಪದೇ ಡೀಸೆಲ್ ದರ ಹೆಚ್ಚಳದಿಂದಾಗಿ 4 ಸಾರಿಗೆ ನಿಗಮಗಳ ಮೇಲಿನ ಆರ್ಥಿಕ ಹೊರೆ ಹೆಚ್ಚಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಮೂರು ಬಾರಿ ಡೀಸೆಲ್ ಬೆಲೆ ಹೆಚ್ಚಳವಾಗಿದ್ದು, ಇದರಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಿಗೆ 25 ಕೋಟಿ ರೂ.ಹೆಚ್ಚುವರಿ ವೆಚ್ಚವಾಗಿದೆ.

ಇದು ಹೀಗೆ ಮುಂದುವರೆದರೆ ವಾರ್ಷಿಕ 300 ಕೋಟಿ ರೂ. ಹೆಚ್ಚುವರಿ ವೆಚ್ಚ ಮಾಡಬೇಕಾಗುತ್ತದೆ. ಇಷ್ಟಾದರೂ ಪ್ರಯಾಣದರ ಏರಿಕೆಯ ಚಿಂತನೆ ಮಾಡಿಲ್ಲ. ಸದ್ಯಕ್ಕೆ ಪ್ರಯಾಣದರ ಹೆಚ್ಚಳ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಡೀಸೆಲ್ ದರವನ್ನು ಪ್ರತಿ ಲೀಟರ್ ಗೆ 5 ರೂ.ವರೆಗೆ ಹೆಚ್ಚಳ ಮಾಡಲಾಗಿದ್ದು, ಕಳೆದ ಒಂದು ತಿಂಗಳಲ್ಲಿ ಸಾರಿಗೆ ನಿಗಮಗಳಿಗೆ 25 ಕೋಟಿ ರೂ. ಹೆಚ್ಚುವರಿ ಆರ್ಥಿಕ ಹೊರೆಯಾಗಿದೆ. ಡೀಸೆಲ್ ಪೂರೈಕೆದಾರರಿಗೆ ಬಾಕಿ, ಸಾರಿಗೆ ನೌಕರರ ವೇತನ, ಭವಿಷ್ಯ ನಿಧಿ ಪಾವತಿ ಬಾಕಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳು ಕಳೆದ ಮಾರ್ಚ್ 31ರ ಅಂತ್ಯಕ್ಕೆ 7130.80 ಕೋಟಿ ರೂ. ಹೊಣೆಗಾರಿಕೆ ಹೊಂದಿವೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿಜೆಪಿ ನಾಯಕರಿಗೆ ಸೋಲಿನ ಹತಾಶೆ - ಕಾಂಗ್ರೆಸ್ ಮುಖಂಡ  ಕುಮಟಾಕರ್ ವ್ಯಂಗ್ಯಬೆಳೆ ವಿಮೆ ಪ್ರಚಾರ ಕಾರ್ಯಕ್ಕೆ ಶಾಸಕ ಎಂ.ಟಿ.ಕೃಷ್ಣಪ್ಪ ಚಾಲನೆಕೃಷಿ ಪಂಡಿತ ಪ್ರಶಸ್ತಿಗೆ ಆನ್‌ಲೈನ್ ಅರ್ಜಿ ಆಹ್ವಾನಬಂಗಾಳ ಆರಾಧನಾ ಸ್ಥಳಗಳ ಮೇಲೆ ದಾಳಿ ನಿಲ್ಲಿಸಲಿ : ಎಂ, ಗಂಗಾಧರಕಂದಾಯ ಇಲಾಖೆಯ ಜಾಗ ಒತ್ತುವರಿ ಆರೋಪ : ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದ  ಜಮಖಂಡಿ ತಹಶೀಲ್ದಾರ  ವಿರುದ್ಧ ಸಾರ್ವಜನಿಕರ ಆಕ್ರೋಶವಿಂಡೀಸ್- ಲಂಕಾ ಟೆಸ್ಟ್ ಡ್ರಾದಲ್ಲಿ ಅಂತ್ಯಅಂಬೋಲಿ ಘಾಟ್‌ನಲ್ಲಿ ಭೂಕುಸಿತ :ರಸ್ತೆಗೆ ಬಿದ್ದ  ದೊಡ್ಡ ಬಂಡೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ, ವೇದಗಂಗಾ ನದಿ : 30ಕ್ಕೂ ಹೆಚ್ಚು ಪರ್ಯಾಯ ಮಾರ್ಗದಲ್ಲಿ ಸಂಚಾರಮೂರನೇ ಚುಟುಕು ಪಂದ್ಯದಲ್ಲಿ ಇಂಗ್ಲೆAಡ್‌ಗೆ ಗೆಲುವುಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಭಾರಿ ಶಾಕ್ : ರಾಜ್ಯದ ಹಲವೆಡೆ ಏಕಕಾಲಕ್ಕೆ ದಾಳಿ