Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹನಿ ಟ್ರ್ಯಾಪ್ ಪ್ರಕರಣ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

Advertisement
ಬೆಂಗಳೂರು: ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಪಕ್ಷ ನಾಯಕ ಆರ್.ಅಶೋಕ್, ಆರಗ ಜ್ಞಾನೇಂದ್ರ, ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ ಎನ್ ರಾಜಣ್ಣ ಅವರು ಹನಿ ಟ್ರ್ಯಾಪ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದ್ದು, ಈ ಬಗ್ಗೆ ಉತ್ತರಿಸಲು ಕೋರಿ ಇದಕ್ಕೆ ಕಾರಣರಾದವರನ್ನು ವಜಾ ಮಾಡಬೇಕು ಹಾಗೂ ಸದನದಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳು ಉತ್ತರಿಸಿ ಸದನದ ಮೌಲ್ಯವನ್ನು ಎತ್ತಿಹಿಡಿಯಬೇಕೆಂದು ಹಾಗೂ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ ಸಂದರ್ಭದಲ್ಲಿ ಸಿಎಂ ಮೇಲಿನಂತೆ ಉತ್ತರಿಸಿದರು.

ಸಚಿವರು ಹಾಗೂ ಪರಿಶಿಷ್ಟ ವರ್ಗದ ನಾಯಕರೂ ಆಗಿರುವ ಕೆ.ಎನ್ ರಾಜಣ್ಣ ಅವರು ಮಾಡಿರುವ ಆರೋಪಕ್ಕೆ ಈಗಾಗಲೇ ಗೃಹ ಸಚಿವರು ಉತ್ತರಿಸಿದ್ದಾರೆ.  ಪ್ರಕರಣದಲ್ಲಿ ಯಾರೇ ಆಗಿದ್ದರೂ ರಕ್ಷಣೆ ಕೊಡಬೇಕಾಗಿರುವುದು ಸರ್ಕಾರದ ಜವಾಬ್ದಾರಿ, ಕಾನೂನಿನ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು. ರಾಜಣ್ಣ ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ಮಾಡಿಸಲಾಗುತ್ತದೆ ಎಂದು ಗೃಹ ಸಚಿವರು ಉತ್ತರಿಸಿದ ಮೇಲೆ ಪುನಃ ಪ್ರಸ್ತಾಪಿಸುವುದು ತರವಲ್ಲ. ಹನಿ ಟ್ರ್ಯಾಪ್ ಯಾರೇ ಮಾಡಿಸಿದ್ದರೂ ಅದು ತಪ್ಪೇ ಎಂದರು. ಎತ್ತು ಈಯಿತು ಎಂದ ಮಾತ್ರಕ್ಕೆ ಕೊಟ್ಟಿಗೆಗೆ ಕಟ್ಟು ಎಂದು ಹೇಳಲಾಗುವುದಿಲ್ಲ. ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ. ಹೇಳಿದ್ದರೆ ಕ್ರಮ ತೆಗೆದುಕೊಳ್ಳಬಹುದಾಗಿತ್ತು. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ