LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಮನೆಯಲ್ಲಿ ಪೂಜೆ ಮಾಡಿಸುವ ನೆಪದಲ್ಲಿ ಬಾಬಾರನ್ನೇ ಅಪಹರಿಸಿದ ಕಿರಾತಕರು : 4.25 ಲಕ್ಷ ರೂ. ಲೂಟಿ 

Advertisement

ಬೆಂಗಳೂರು : ಮನೆಯಲ್ಲಿ ಪೂಜೆ ಮಾಡಿಸುವ ನೆಪದಲ್ಲಿ ಬಾಬಾ​ ಒಬ್ಬರನ್ನು ಅಪಹರಿಸಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರೋಬ್ಬರಿ 4.25 ಲಕ್ಷ ರೂಪಾಯಿ ದೋಚಿದ್ದ ನಾಲ್ವರು ಕಿಡ್ನಾಪರ್ಸ್‌ಗಳನ್ನು ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ತುಮಕೂರು ಮೂಲದ ಆರಿಫ್ ಮತ್ತು ಆದಿಲ್, ಚಿಕ್ಕಬಾಣಾವರದ ಇಮ್ರಾನ್ ಹಾಗೂ ಆರ್.ಟಿ.ನಗರದ ಕಾದೀರ್ ಬಂಧಿತ ಆರೋಪಿಗಳಾಗಿದ್ದಾರೆ. 

ನಗರದ ಯಲಹಂಕದಲ್ಲಿ ವಾಸವಾಗಿರುವ ಬಾಬಾ​ ಮೊಹಮ್ಮದ್ ತಾರಿಕ್ ಹುಸೇನ್ ಎಂಬುವರು ನೀಡಿದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.

ಕೆಲ ದಿನಗಳ ಹಿಂದೆ ಬಾಬಾ​ ತಾರಿಕ್ ಹುಸೇನ್ ಅವರನ್ನು ಸಂಪರ್ಕಿಸಿದ್ದ ಆರೋಪಿ ಆರಿಫ್, ನಮ್ಮ ಮನೆಗೆ ಬಂದು ಶಾಂತತೆಗಾಗಿ ಪೂಜೆ ಮಾಡಿಕೊಡಬೇಕು ಎಂದು ಕೋರಿ ಮುಂಗಡವಾಗಿ 10 ಸಾವಿರ ರೂಪಾಯಿಗಳನ್ನು ಆನ್‌ಲೈನ್ ಮೂಲಕ ಪಾವತಿಸಿದ್ದ. ಆದರೆ ಬಾಬಾ​ ತಾರಿಕ್ ಕಾರಣಾಂತರಗಳಿಂದ ಮೂರು ದಿನಗಳ ಕಾಲ ಭೇಟಿ ನೀಡಿರಲಿಲ್ಲ. ಜೂನ್ 29 ರಂದು ಆರೋಪಿ ಆರಿಫ್, ಬಾಬಾ​ನನ್ನು ಕರೆತರಲು ತಾನೇ ಕಾರು ಕಳುಹಿಸಿಕೊಡುವುದಾಗಿ ಹೇಳಿದ್ದ. ಅದರಂತೆ ಕಾರ್ ಬಂದಾಗ ತಾರಿಕ್ ಹೋಗಲು ಸಿದ್ಧರಿರಲಿಲ್ಲ. ಈ ವೇಳೆ ಆರೋಪಿಗಳು ಅವರನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಪರಾರಿಯಾಗಿದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತಕಳಸಕೊಪ್ಪ ಸೇರಿದಂತೆ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ: ಜೆ ಟಿ ಪಾಟೀಲಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಕೋಟಿ ಕೋಟಿ ಹಣ ವಂಚನೆ ಕೇಸ್ : ಶಿವಾನಂದ ನೀಲಣ್ಣವರ ಇಡಿ ರೇಡ್ಹಾಡ ಹಾಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ ಆಗಸ್ಟ್ 15ವರೆಗೆ ಖಾತೆ ಹಂಚಿಕೆಗೆ ಕಾಲಾವಕಾಶ ಇದೆ : ಡಿ.ಕೆ.ಶಿವಕುಮಾರ್ಆಗಸ್ಟ್ 13 ರಂದು ಅಧಿವೇಶನ,14 ರಂದು ನೂತನ ಉಪಸಭಾಪತಿಗಳ ಆಯ್ಕೆ : ಡಿ.ಕೆ.ಶಿವಕುಮಾರ್ಹುತಾತ್ಮ ಯೋಧ ಅಂಗಡಿ ಮಂಜುನಾಥ ನಾಯಕ ಸಾದಾಪುರ ಪುಣ್ಯ ಸ್ಮರಣೆ​ಶ್ರೀ ಕ್ಷೇತ್ರ ಪರಕನಹಟ್ಟಿಯಿಂದ ಹುಬ್ಬಳ್ಳಿಗೆ ಪ್ರಥಮ ವರ್ಷದ ಸಿದ್ಧಾರೂಢ ಪಾದಯಾತ್ರೆ: ಭಕ್ತಿಪರವಶತೆಯಿಂದ ಚಾಲನೆಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ  : ಶಾಸಕ ಜಿ.ಹಂಪಯ್ಯ ನಾಯಕ ಸಾಹುಕಾರ