LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಾಜ್ಯದಲ್ಲಿ ಮರ್ಯಾದೆ ಗೇಡು ಹತ್ಯೆಗೆ ಇವ ನಮ್ಮವ ವಿಧೇಯಕ-2026 ಮಂಡನೆ

Advertisement
ಬೆಂಗಳೂರು: ರಾಜ್ಯದಲ್ಲಿ ಜಾತಿ ಕಾರಣಕ್ಕಾಗಿ ನಡೆಯುವ ಹತ್ಯೆಗಳು (ಮರ್ಯಾದೆ ಗೇಡು ಹತ್ಯೆ) ಮತ್ತು ಅಂತರ್ಜಾತಿ ವಿವಾಹವಾಗುವ ದಂಪತಿಗಳ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಯಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಈ ನಿಟ್ಟಿನಲ್ಲಿ ರೂಪಿಸಲಾದ 'ಇವ ನಮ್ಮವ ಇವ ನಮ್ಮವ ವಿಧೇಯಕ-2026'ಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ.ಪ್ರಸಕ್ತ ಅಧಿವೇಶನದಲ್ಲೇ ಈ ವಿಧೇಯಕವನ್ನು ಉಭಯ ಸದನಗಳಲ್ಲಿ ಮಂಡಿಸಲು ಸರ್ಕಾರ ತೀರ್ಮಾನಿಸಿದೆ.

ವಿಧೇಯಕದ ಪ್ರಮುಖ ಅಂಶಗಳು ಮತ್ತು ಶಿಕ್ಷೆಯ ವಿವರ:

ಜಾತಿ ದ್ವೇಷ ಮತ್ತು ಮರ್ಯಾದೆಗೇಡು ಹತ್ಯೆಗಳನ್ನು ಹತ್ತಿಕ್ಕಲು ಈ ಕಾಯ್ದೆಯಲ್ಲಿ ಕಠಿಣ ಕಾನೂನು ಕ್ರಮಗಳನ್ನು ಸೂಚಿಸಲಾಗಿದೆ.

ಮರ್ಯಾದೆಗೇಡು ಹತ್ಯೆಗೆ ಜೀವಾವಧಿ: ಜಾತಿ ಕಾರಣಕ್ಕೆ ಮದುವೆ ನಿರಾಕರಿಸಿ ಅಥವಾ ಮದುವೆಯಾದ ನಂತರ ಮರ್ಯಾದೆ ಹೋಯಿತೆಂದು ಕೊಲೆ ಮಾಡಿದರೆ ಅಂತಹವರಿಗೆ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶವಿದೆ.

ಕೊಲೆ ಯತ್ನಕ್ಕೆ ಶಿಕ್ಷೆ: ವಿವಾಹವಾದ ಕಾರಣಕ್ಕೆ ದಂಪತಿಗಳ ಕೊಲೆಗೆ ಸಂಚು ರೂಪಿಸಿದರೆ ಅಥವಾ ದಾಳಿ ಮಾಡಿದರೆ ಕನಿಷ್ಠ 5 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ದೈಹಿಕ ಹಲ್ಲೆಗೆ ಶಿಕ್ಷೆ: ಅಂತರ್ಜಾತಿ ವಿವಾಹವಾದವರ ಮೇಲೆ ಹಲ್ಲೆ ನಡೆಸಿದರೆ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶ ನೀಡಲಾಗಿದೆ.

ಸಣ್ಣಪುಟ್ಟ ಹಲ್ಲೆಗೂ ದಂಡನೆ: ಗಂಭೀರವಲ್ಲದ ಹಲ್ಲೆ ನಡೆಸಿದ ಸಂದರ್ಭದಲ್ಲಿ 2 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ವಂಚನೆಗೆ 'ರೇಪ್' ಶಿಕ್ಷೆ: ವಿವಾಹದ ಆಮಿಷವೊಡ್ಡಿ, ನಂತರ ಜಾತಿಯ ಕಾರಣ ನೀಡಿ ವಂಚಿಸಿದರೆ ಅದನ್ನು 'ರೇಪ್' (ಅತ್ಯಾಚಾರ) ಎಂದು ಪರಿಗಣಿಸಿ ಕಠಿಣ ಶಿಕ್ಷೆ ನೀಡಲಾಗುವುದು.

ದಂಪತಿಗಳಿಗೆ ರಕ್ಷಣೆ: ಜೀವ ಬೆದರಿಕೆ ಇರುವ ಅಂತರ್ಜಾತಿ ವಿವಾಹಿತ ದಂಪತಿಗಳಿಗೆ ಪೊಲೀಸ್ ಇಲಾಖೆಯ ಮೂಲಕ ವಿಶೇಷ ರಕ್ಷಣೆ ಒದಗಿಸಲು ಈ ವಿಧೇಯಕದಲ್ಲಿ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಜಾತಿ ವೈಷಮ್ಯ ತಡೆದು ಸಾಮಾಜಿಕ ಸಮಾನತೆ ತರುವುದು ಸರ್ಕಾರದ ಈ ನಿರ್ಧಾರದ ಮುಖ್ಯ ಉದ್ದೇಶವಾಗಿದೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ