ಬೆಂಗಳೂರು: ಈ ಬಾರಿ ಆಗಸ್ಟ್ ನಲ್ಲಿ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ.
ವಾಡಿಕೆಯಂತೆ ಜುಲೈನಲ್ಲಿ ನಡೆಯಬೇಕಿದ್ದ ಮಳೆಗಾಲದ ವಿಧಾನ ಮಂಡಲ ಅಧಿವೇಶನವನ್ನು ಆಗಸ್ಟ್ ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಆಗಸ್ಟ್ ಮೊದಲ ವಾರ ಅಥವಾ ಎರಡನೇ ವಾರ ವಿಧಾನ ಮಂಡಲ ಅಧಿವೇಶನ ದಿನಾಂಕ ನಿಗದಿ ಮಾಡಲಾಗುವುದು.
ನಂತರ ದಿನಾಂಕ ಪ್ರಕಟಿಸಲಾಗುವುದು ಎಂದು ಗುರುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ್ದಾರೆ.
ಜುಲೈ ತಿಂಗಳಲ್ಲಿ ಮುಂಗಾರು ಅಧಿವೇಶನ ಕರೆಯಬೇಕಿತ್ತು. ಎಸ್‌ಐಆರ್ ನಡಿಯುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ಮುಗಿಯುವರೆಗೂ ಕಾಯಲು ತೀರ್ಮಾನಿಸಲಾಗಿದೆ.
ಎಸ್‌ಐಆರ್ ಮುಗಿದ ಬಳಿಕ ವಿಧಾನಸಭೆ ಅಧ್ಯಕ್ಷರ ಚುನಾವಣೆ ಬಗ್ಗೆಯೂ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.


