Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಂಡುಗಳಾಗಿ ಕತ್ತರಿಸಿ ಎಸೆಯುತ್ತೇವೆ : ನಟಿ ಏಂಜೆಲ್ ರೈಗೆ ಬೆದರಿಕೆ 

Advertisement

ಮುಂಬೈ: ನಟಿ ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಿ 22 ವರ್ಷದ ಏಂಜೆಲ್ ರೈ ಅವರಿಗೆ ಇಮೇಲ್ ಮತ್ತು ಇನ್‌ಸ್ಟಾಗ್ರಾಮ್ ಮೂಲಕ ಅಪರಿಚಿತರು ಅಶ್ಲೀಲ ಸಂದೇಶ ಹಾಗೂ ಕೊಲೆ ಬೆದರಿಕೆಗಳನ್ನು ಹಾಕುತ್ತಿರುವುದಾಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಏಂಜಲ್‌ ರೈ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ 25 ಮಿಲಿಯನ್‌ಗಿಂತಲೂ ಹೆಚ್ಚು ಅನುಯಾಯಿಗಳಿದ್ದಾರೆ.ಅವರ ವೆಬ್ ಸರಣಿ 'ಘೋಟಾಲಾ' ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಇದೇ ಸಂದರ್ಭ ಅವರಿಗೆ ಅಶ್ಲೀಲ ಹಾಗೂ ಕೊಲೆ ಬೆದರಿಕೆ ಸಂದೇಶಗಳು ಬರುತ್ತಿದೆ.


ಮಾರ್ಚ್ 22 ರಂದು ದಾಖಲಾಗಿರುವ ಎಫ್‌ಐಆರ್ ಪ್ರಕಾರ ಗೋರೆಗಾಂವ್ ಪಶ್ಚಿಮದಲ್ಲಿ ವಾಸಿಸುವ ರೈ ಅವರಿಗೆ ಮಾರ್ಚ್ 16 ರಂದು ಅಪರಿಚಿತ ವ್ಯಕ್ತಿಯಿಂದ ಅಶ್ಲೀಲ ಸಂದೇಶಗಳು ಮತ್ತು ಕೊಲೆ ಬೆದರಿಕೆ ಇರುವ ಇಮೇಲ್ ಬಂದಿದೆ. ಈ ಬೆದರಿಕೆಗಳಲ್ಲಿ ಜೀವಂತವಾಗಿ ಸುಟ್ಟುಹಾಕುತ್ತೇವೆ, ತುಂಡುಗಳಾಗಿ ಕತ್ತರಿಸಿ ಎಸೆಯುತ್ತೇವೆ ಎಂದು ಬರೆಯಲಾಗಿದೆ.


ಈ ಹಿಂದೆಯೂ ಇದೇ ರೀತಿಯ ಇಮೇಲ್‌ಗಳು ಬಂದಿವೆ ಎಂದು ಅವರು ಆರೋಪಿಸಿದ್ದಾರೆ. 2023ರ ಆಗಸ್ಟ್ ಮತ್ತು 2024ರ ಮಾರ್ಚ್ ನಡುವೆ ಆಕೆಗೆ ಇಮೇಲ್, ಇನ್‌ಸ್ಟಾಗ್ರಾಮ್ ಮತ್ತು ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಅಶ್ಲೀಲ ಮತ್ತು ಬೆದರಿಕೆ ಸಂದೇಶಗಳು ಬಂದಿವೆ. ನನಗೆ ಹಲವಾರು ದಿನಗಳಿಂದ ಅಶ್ಲೀಲ ಸಂದೇಶಗಳು ಬರುತ್ತಿವೆ. ಕೊನೆಗೆ ನಾನು ಬೇಸತ್ತು ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದೆ ಎಂದಿದ್ದಾರೆ.


ಮುಖ್ಯವಾಗಿ ನನ್ನ ಹೊಸ ವೆಬ್ ಸರಣಿ 'ಘೋಟಲಾ'ದ ಟ್ರೇಲರ್ ಬಿಡುಗಡೆಯಾದ ನಂತರ ಆರೋಪಿಗಳು ನನಗೆ ಕೊಲೆ ಬೆದರಿಕೆಗಳನ್ನು ಕಳುಹಿಸಿದ್ದಾರೆ. ಆರಂಭದಲ್ಲಿ ನನಗೆ ಇನ್‌ಸ್ಟಾಗ್ರಾಮ್‌ನಲ್ಲಿ ಸಂದೇಶಗಳು ಬಂದವು. ನಾನು ಆ ಖಾತೆಗಳನ್ನು ಬ್ಲಾಕ್‌ ಮಾಡಿದೆ.


ಆದರೆ ಆರೋಪಿಗಳು ವಿವಿಧ ಖಾತೆಗಳಿಂದ ಸಂದೇಶಗಳನ್ನು ಕಳುಹಿಸುತ್ತಲೇ ಇದ್ದರು. ಕಳೆದ ಎರಡು ವರ್ಷಗಳಿಂದ ನಾನು ಅದನ್ನು ಸಹಿಸಿಕೊಂಡಿದ್ದೇನೆ. ನನಗೆ ಇದರಿಂದ ಬೇಸರವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ