LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಮಲಪ್ರಭಾ ನದಿಯಲ್ಲಿ ಮೂರು ಬೈಕ್ ಪತ್ತೆ 

Advertisement
ಬೆಳಗಾವಿ: ಜಿಲ್ಲೆ ಬೈಲಹೊಂಗಲ ತಾಲ್ಲೂಕಿನ ನಯಾನಗರ ಸೇತುವೆ ಬಳಿ ಬುಧವಾರ, ಮಲಪ್ರಭಾ ನದಿ ನೀರಿನಲ್ಲಿ ಮೂರು ಬೈಕುಗಳು ‍ಪತ್ತೆಯಾಗಿವೆ. ಇವುಗಳನ್ನು ಕದ್ದು, ಚಿನ್ನದಂಗಡಿ ದರೋಡೆಗೆ ಬಳಸಿ, ಸಾಕ್ಷ್ಯ ನಾಶಕ್ಕೆ ನದಿಗೆ ಬಿಸಾಕಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.

KA25 G-1459, KA24 J-7907 ಎಂಬ ಸಂಖ್ಯೆಯ ಎರಡು ಬೈಕ್‌ ಹಾಗೂ ನಂಬರ್‌ ಪ್ಲೇಟ್‌ ಇಲ್ಲದ ಇನ್ನೊಂದು ಬೈಕ್‌ ಪತ್ತೆಯಾಗಿದೆ.

ಬುಧವಾರ ನದಿ ಸೇತುವೆ ಮೇಲೆ ಹೊರಟವರಿಗೆ ಇವು ಕಂಡಿವೆ. ಬೈಲಹೊಂಗಲ ಪೊಲೀಸರು ಸ್ಥಳಕ್ಕೆ ಧಾವಿಸಿ, ಅವುಗಳನ್ನು ಹೊರಕ್ಕೆ ತಂದರು.

ಸವದತ್ತಿ ಪಟ್ಟಣದಲ್ಲಿ 2025ರ ಡಿಸೆಂಬರ್‌ 22ರಂದು ಚಿನ್ನದ ಅಂಗಡಿ ದರೋಡೆ ಮಾಡಲಾಗಿತ್ತು. ₹12 ಲಕ್ಷ ಮೌಲ್ಯದ ಚಿನ್ನಾಭರಣ ಕದಿಯಲಾಗಿತ್ತು..

ಮೂರು ಬೈಕುಗಳ ಮೇಲೆ ಬಂದಿದ್ದ 9 ಆರೋಪಿಗಳು ದರೋಡೆ ಮಾಡಿಕೊಂಡು ಪರಾರಿಯಾಗಿದ್ದರು. ಇದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಬಹುಶಃ ಈ ಮೂರೂ ಬೈಕುಗಳನ್ನು ಕದ್ದು, ಚಿನ್ನಾಭರಣ ದರೋಡೆಗೆ ಬಳಸಿದ್ದಾರೆ. ಸಾಕ್ಷ್ಯ ನಾಶಕ್ಕಾಗಿ ಮಲಪ್ರಭಾ ನದಿಯಲ್ಲಿ ಎಸೆದು ಹೋದ ಶಂಕೆ ಇದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ರಾಮರಾಜನ್‌ ತಿಳಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್