Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿಯಲ್ಲಿ ಘನಘೋರ ದುರಂತ : ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಮಕ್ಕಳು ಸಾವು 

Advertisement
 

ಬೆಳಗಾವಿ : ಈಗ ಹೇಳಿ ಕೇಳಿ ಬೇಸಿಗೆ ರಜೆ. ಮಕ್ಕಳು ಕುಣಿದು ಕುಪ್ಪಳಿಸುವ ಸಮಯ. ಆದ್ರೆ ಪೋಷಕರು ಹೆಚ್ಚು ನಿಗಾ ವಹಿಸಬೇಕು. ಯಾಕಂದ್ರೆ, ಬೆಳಗಾವಿಯಲ್ಲಿ ಘನಘೋರ ದುರಂತವೊಂದು ಸಂಭವಿಸಿದೆ.

ಶಾಲೆಗೆ ರಜೆ ಇದ್ದ ಕಾರಣಕ್ಕೆ ಈಜಲು ಹೋದ ಮೂವರು ಬಾಲಕರು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟ‌ನೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ ಜಮೀನಿನಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಇಂಗಳಿ ಗ್ರಾಮದ ಪೃಥ್ವಿರಾಜ್‌ ಕೆರಬಾ( 13), ಅಥರ್ವ ಸೌಂದಲಗೆ (15), ಸಮರ್ಥ ಗಡಕರಿ (13) ಮೃತ ವಿದ್ಯಾರ್ಥಿಗಳು.

ಮೂವರು ವಿದ್ಯಾರ್ಥಿಗಳಿಗೂ ಈಜು ಬರುತ್ತಿರಲಿಲ್ಲ. ಮೂವರು ಸೇರಿ ಈಜು ಕಲಿಯಲು ಮನೆಯಿಂದ ಸೈಕಲ್ ತೆಗೆದುಕೊಂಡು ಊರ ಹೊರಗಿರುವ ಕೃಷಿ ಹೊಂಡಕ್ಕೆ ಈಜು ಕಲಿಯಲು ಕೃಷಿ ಹೊಂಡಕ್ಕೆ ಹೋಗಿದ್ದ ವೇಳೆ ಘಟನೆ ನಡೆದಿದೆ.

ಮೂವರು ವಿದ್ಯಾರ್ಥಿಗಳಿಗೆ ಈಜು ಬರದೆ ಇದ್ದ ಕಾರಣಕ್ಕೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಹೊಲದ ಮಾಲೀಕ ಸುತ್ತಾಡುತ್ತಿದ್ದಾಗ ಹೊಂಡದ ಪಕ್ಕದಲ್ಲಿ ಸೈಕಲ್ ಇದ್ದುದನ್ನು ಕಂಡು ಹೊಂಡ ಇಣುಕಿದಾಗ ಮೂವರು ಬಾಲಕರ ಶವ ಪತ್ತೆಯಾಗಿದೆ.

ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ರೋಧನೆ ಮುಗಿಲುಮುಟ್ಟಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ