ಚಾಮರಾಜನಗರ: ಕಾಡು ಪ್ರಾಣಿಗಳನ್ನು ಬೇಟೆಯಾಡಿ ಮಾಂಸ ಬೇರ್ಪಡಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಕಾಡಿಗಳ್ಳರು ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.
ಶಾಗ್ಯ ವ್ಯಾಪ್ತಿಯ ದಟ್ಟಿ ಅರಣ್ಯಪ್ರದೇಶದಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡಿದ್ದ ಮೂವರು ಕಾಡುಗಳ್ಳರು, ಪ್ರಾಣಿಗಳ ಮಾಂಸ ಬೇರ್ಪಡಿಸುತ್ತಿದ್ದರು.
ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಕೂಡಲೇ ಶಸ್ತ್ರಾಸ್ತ್ರ ಕೆಳಗಿಟ್ಟು ಶರಣಾಗುವಂತೆ ಸೂಚಿಸಿದ್ದಾರೆ. ಆದರೆ ಕಾಡುಗಳ್ಳರು ಶರಣಾಗದೇ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಫೈರಿಂಗ್ ನಡೆಸಿದ್ದಾರೆ. ತಕ್ಷಣ ಎಚ್ಚೆತ್ತ ಅರಣ್ಯ ಸಿಬ್ಬಂದಿ ಕೌಂಟರ್ ಫೈರಿಂಗ್ ನಡೆಸಿದ್ದಾರೆ.


