LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಗೋಕರ್ಣ ಸಮುದ್ರದಲ್ಲಿ ಮುಳುಗಿ ಮೂವರು ಐಟಿ ಉದ್ಯೋಗಿಗಳು ಸಾವು

Advertisement

ಉತ್ತರ ಕನ್ನಡ : ಮೋಜು-ಮಸ್ತಿಗಾಗಿ ಗೋಕರ್ಣಕ್ಕೆ ಬಂದಿದ್ದ ಬೆಂಗಳೂರಿನ ಐಟಿ ಕಂಪನಿ ಉದ್ಯೋಗಿಗಳ ತಂಡದ ಪ್ರವಾಸ ದುರಂತಮಯವಾಗಿ ಕೊನೆಗೊಂಡಿದೆ.

ಗೋಕರ್ಣದ ದುಬ್ಬಣಶಶಿ ಕಡಲತೀರದಲ್ಲಿ ಭಾರಿ ಅಲೆಗೆ ಸಿಲುಕಿ ಐವರು ಉದ್ಯೋಗಿಗಳು ಕೊಚ್ಚಿಹೋಗಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಇಬ್ಬರನ್ನು ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ. ಬೆಂಗಳೂರಿನ ಬೆಳ್ಳಂದೂರಿನಲ್ಲಿರುವ ಅಲೋರಿಯಾ ಇಕೋಸ್ಪೇಸ್ ಕಂಪನಿಯ 16 ಉದ್ಯೋಗಿಗಳ ತಂಡ ಪ್ರವಾಸಕ್ಕಾಗಿ ಗೋಕರ್ಣಕ್ಕೆ ಬಂದಿತ್ತು. 

ದುಬ್ಬಣಶಶಿ ಬೀಚ್‌ನಲ್ಲಿರುವ ಕೋಜೆ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದ ತಂಡದ ಕೆಲವರು ಸಮುದ್ರದಲ್ಲಿ ಆಟವಾಡಲು ನೀರಿಗಿಳಿದಿದ್ದರು. ಈ ವೇಳೆ ಏಕಾಏಕಿ ಅಪ್ಪಳಿಸಿದ ಭಾರಿ ಅಲೆಗೆ ಐವರು ಸಿಲುಕಿ ಕೊಚ್ಚಿಹೋಗಿದ್ದರು.

ಘಟನೆ ತಿಳಿಯುತ್ತಿದ್ದಂತೆ ರೆಸಾರ್ಟ್‌ನ ಜೀವರಕ್ಷಕ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ತಕ್ಷಣ ಕಾರ್ಯಾಚರಣೆ ನಡೆಸಿ ನಾಲ್ವರನ್ನು ದಡಕ್ಕೆ ಕರೆತಂದಿದ್ದರು. 

ಆದರೆ ತೀವ್ರ ಅಸ್ವಸ್ಥಗೊಂಡಿದ್ದ ಜಾರ್ಖಂಡ್ ಮೂಲದ 22 ವರ್ಷದ ಶೋಭಾ ದಾಸ್ ಆಸ್ಪತ್ರೆಯಲ್ಲಿ ಮೃತಪಟ್ಟರು. ತಂಡದ ನಾಯಕ ಮಹಮ್ಮದ್ ಅಕ್ರಮ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗಮಧ್ಯೆ ಮೃತಪಟ್ಟರು.

ಘಟನೆಯಲ್ಲಿ ಬೆಂಗಳೂರಿನ ಕಲ್ಯಾಣನಗರದ 24 ವರ್ಷದ ವಿಶ್ವ ಸಮುದ್ರದಲ್ಲಿ ನಾಪತ್ತೆಯಾಗಿದ್ದರು. ಇದೀಗ ಶೋಧ ಕಾರ್ಯಾಚರಣೆ ವೇಳೆ ಅವರ ಮೃತದೇಹ ಪತ್ತೆಯಾಗಿದೆ. ನಿಶಾಂತ್ ಮತ್ತು ಮಹಮ್ಮದ್ ಖಾಸಿಂ ಅವರನ್ನು ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದು, ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

 

 

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನವೀನ್ ಬತಲಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ನವೆಂಬರ್ 6 ರಂದು ನೇಸರಗಿ ವಿದ್ಯಾ ಮಂದಿರ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಅಪ್ಪಾ. ಎದ್ದೇಳಪ್ಪ.. ಎದ್ದೇಳಪ್ಪ : ಮೃತ ಇನ್ಸ್‌ಪೆಕ್ಟರ್‌ ಸಾಳುಂಕೆ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಮಗಳುವಾಹನ ಸವಾರರಿಗೆ ಮತ್ತೆ ಶಾಕ್ : ಮತ್ತೆ 4.45 ರೂ.ಏರಿಕೆ ಕಂಡ ಸಿಎನ್‌ಜಿ ದರನಟ ಧನ್ವೀರ್ ಗೌಡ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿದ ನಟ ದರ್ಶನ್ ಪತ್ನಿಬೈಲಹೊಂಗಲಕ್ಕೆ ಗ್ರಾಮೀಣಾಭಿವೃದ್ಧಿ ಆಯುಕ್ತ ವೈ.ಎಸ್. ಪಾಟೀಲ ಭೇಟಿಬರಿಗೈಯಲ್ಲೇ ಟಾಯ್ಲೆಟ್ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ : ವಿಡಿಯೋ ವೈರಲ್ಗೋಕರ್ಣ ಸಮುದ್ರದಲ್ಲಿ ಮುಳುಗಿ ಮೂವರು ಐಟಿ ಉದ್ಯೋಗಿಗಳು ಸಾವುನವೆಂಬರ್ 5 ರಿಂದ ಬಾಂಗ್ಲಾದೇಶ- ವೆಸ್ಟ್ ಇಂಡೀಸ್ 2 ನೇ ಟೆಸ್ಟ್ ಪಂದ್ಯ ನಾಡೆದ್ದು ಭಾರತ- ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯ