Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಷ ಆಹಾರ ಸೇವಿಸಿ ಮೂವರು ಸಾವು

Advertisement
ರಾಯಚೂರು : ರಾಯಚೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಊಟ ಸೇವಿಸಿದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕೆ.ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ತಂದೆ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದಾರೆ.

ಮೃತರನ್ನು ತಂದೆ ರಮೇಶ್ (35) ಪುತ್ರಿ ನಾಗಮ್ಮ (8) ಎಂದು ಗುರುತಿಸಲಾಗಿದೆ. ಇನ್ನು ರಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ದೀಪ (6) (ಮತ್ತೋರ್ವ ಪುತ್ರಿ) ಸಾವನಪ್ಪಿದ್ದಾಳೆ, ರಮೇಶ್ ಪತ್ನಿ ಪದ್ಮ ಅವರನ್ನು ರಿಮ್ಸ್ ಆಸ್ಪತ್ರೆಗೆ ಸದ್ಯ ಕುಟುಂಬಸ್ಥರು ಕರೆದುಕೊಂಡು ಹೋಗಿದ್ದಾರೆ ಇಬ್ಬರು ಮಕ್ಕಳಾದ ಕೃಷ್ಣ, ಚೈತ್ರಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಟ್ಟೆ ನೋವಿಂದ ಬಳಲುತ್ತಿದ್ದವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮೂವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ನಿನ್ನೆ ರಾತ್ರಿ ಜವಳಿಕಾಯಿ ಪಲ್ಯ, ರೊಟ್ಟಿ, ಅನ್ನ, ಸಾಂಬಾರ್ ಸೇವಿಸಿ ಮಲಗಿದ್ದ ಆರು ಜನರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತು.

ಹೊಟ್ಟೆ ನೋವಿನಿಂದ ಅಸ್ವಸ್ಥಗೊಂಡವರನ್ನ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ತಂದೆ ರಮೇಶ್ ಹಾಗೂ ಪುತ್ರಿ ನಾಗಮ್ಮ ಸಾವನ್ನಪ್ಪಿದ್ದರೆ. ಆಸ್ಪತ್ರೆ ಮಾರ್ಗ ಮಧ್ಯೆ ದೀಪಾ ಸಾವನ್ನಪ್ಪಿದ್ದಾರೆ.. ಕವಿತಾಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ