LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಧಾರವಾಡದಲ್ಲಿ ಮಾಜಿ ಶಾಸಕರ ಪುತ್ರನ ಕೊಲೆ ಕೇಸ್ : ಮಹಿಳೆ ಸೇರಿ ಮೂವರು ಅರೆಸ್ಟ್

Advertisement
ಹುಬ್ಬಳ್ಳಿ :  ಮಹಿಳೆಯೊಂದಿಗೆ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಮಾಜಿ ಶಾಸಕರೊಬ್ಬರ ಪುತ್ರನ ಕೊಲೆಯಾಗಿರುವುದು ಧಾರವಾಡ ಗ್ರಾಮೀಣ ಠಾಣೆ ಪೊಲೀಸರ ತನಿಖೆಯಿಂದ ತಿಳಿದುಬಂದಿದ್ದು, ಈ ಸಂಬಂಧ ಮಹಿಳೆ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಧಾರವಾಡದ ರಾಮಾಪುರ ಗ್ರಾಮದ ರೈಲ್ವೆ ಹಳಿ ಪಕ್ಕದಲ್ಲಿರುವ ದಟ್ಟ ಅರಣ್ಯ ಪ್ರದೇಶದಲ್ಲಿ ಕಾರಿನೊಳಗೆ ಗುರುತು ಸಿಗದಂತೆ ದುಷ್ಕರ್ಮಿಗಳು ರಾಜು ಬೋಳಶೆಟ್ಟಿ ಅವರನ್ನು ಸುಟ್ಟು ಪರಾರಿಯಾಗಿದ್ದರು.

ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ರಾಜು ಸಾಲದ ರೂಪದಲ್ಲಿ ಹಣ ನೀಡುತ್ತಿದ್ದರು. ಇದುವರೆಗೂ 2 ಲಕ್ಷ ರೂ.ಗೂ ಹೆಚ್ಚು ಹಣ ಪಡೆದುಕೊಂಡಿದ್ದ ಮಹಿಳೆ ಇತ್ತೀಚೆಗೆ ರಾಜು ಅವರೊಂದಿಗೆ ಮನಸ್ತಾಪ ಹೊಂದಿದ್ದರು.

ನಿನ್ನೆಯೂ ಸಹ ರಾಜು ಅವರ ಜಮೀನಿನ ಬಳಿ ಮಹಿಳೆ ಹೋಗಿದ್ದು, ಆಕೆಯ ಪ್ರಿಯಕರ ಹಾಗೂ ಮಗ ಸೇರಿ ರಾಜು ಅವರನ್ನು ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಲು ಬೆಂಕಿ ಹಚ್ಚಿರುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

ಜಮೀನಿನಲ್ಲೇ ಕೊಲೆ ಮಾಡಿ ರಾಜು ಅವರ ಕಾರಿನ ಹಿಂದಿನ ಸೀಟಿನಲ್ಲಿ ಮೃತದೇಹವಿಟ್ಟು ಮೊದಲೇ ಮಾಡಿಕೊಂಡ ಸಂಚಿನಂತೆ ತಂದಿದ್ದ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಮಹಿಳೆ ಸೇರಿ ಮೂವರು ಪರಾರಿಯಾಗಿದ್ದರು.

ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತನಿಖೆ ಚುರುಕುಗೊಳಿಸಿದ ಪೊಲೀಸರು ಕೆಲವೇ ಗಂಟೆಗಳಲ್ಲಿ ಮಹಿಳೆ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ