Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ಯಾಮೆರಾಮ್ಯಾನ್‌ನನ್ನೇ ಮದುವೆಯಾದ ಮೂವರು ಅಕ್ಕ-ತಂಗಿಯರು

Advertisement

ಲಖ್ನೋ : ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಒಂದು ವಿಚಿತ್ರ ಮದುವೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. 

ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿರುವ ಮೂವರು ಅಕ್ಕ-ತಂಗಿಯರು ತಮ್ಮ ವಿಡಿಯೋಗಳನ್ನು ಚಿತ್ರೀಕರಿಸುತ್ತಿದ್ದ ಕ್ಯಾಮೆರಾಮ್ಯಾನ್‌ನನ್ನೇ ಮದುವೆಯಾಗಿರುವ ಘಟನೆ ಸಂಚಲನ ಮೂಡಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಅಪರೂಪದ ಮದುವೆಯೊಂದು ಉತ್ತರ ಪ್ರದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್‌ನಲ್ಲಿ ಜನಪ್ರಿಯರಾಗಿರುವ ಮೂವರು ಅಕ್ಕ-ತಂಗಿಯರು, ತಮ್ಮ ವಿಡಿಯೋಗಳನ್ನು ಚಿತ್ರೀಕರಿಸುತ್ತಿದ್ದ ಕ್ಯಾಮೆರಾಮ್ಯಾನ್‌ನನ್ನೇ ಒಂದೇ ಸಮಾರಂಭದಲ್ಲಿ ಮದುವೆಯಾಗಿದ್ದು, ಈ ವಿವಾಹದ ವಿಡಿಯೋ ಮತ್ತು ಫೋಟೋಗಳು ವೈರಲ್ ಆದ ಬಳಿಕ ಪ್ರಕರಣ ದೇಶಾದ್ಯಂತ ಗಮನ ಸೆಳೆದಿದೆ.

ದೇವಾಲಯದಲ್ಲಿ ನಡೆದ ಈ ವಿವಾಹದ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಈ ಘಟನೆ ಸ್ಥಳೀಯವಾಗಿ ಭಾರೀ ಚರ್ಚೆಗೆ ಕಾರಣವಾಗಿದೆ.

ಮೂವರು ಯುವತಿಯರು ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್‌ನಲ್ಲಿ ರೀಲ್ಸ್ ಮತ್ತು ವಿಡಿಯೋಗಳ ಮೂಲಕ ಸಾಕಷ್ಟು ಜನಪ್ರಿಯತೆ ಗಳಿಸಿದ್ದರು ಎನ್ನಲಾಗಿದೆ.

 ಇದೇ ಮೂವರು ತಮ್ಮ ವಿಡಿಯೋಗಳನ್ನು ಚಿತ್ರೀಕರಿಸುತ್ತಿದ್ದ ಒಬ್ಬನೇ ಕ್ಯಾಮೆರಾಮ್ಯಾನ್‌ನನ್ನು ಪ್ರೀತಿಸಿ ಮದುವೆಯಾಗಿದ್ದಾರೆ ಎಂಬ ಹೇಳಿಕೆಯಿಂದ ಈ ವಿಡಿಯೋ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, “ನಮ್ಮ ಮದುವೆ ಸನಾತನ ಧರ್ಮಕ್ಕೆ ಅವಮಾನವಲ್ಲ. ಇದು ನಾವು ಪ್ರೀತಿಯಿಂದ ತೆಗೆದುಕೊಂಡ ನಿರ್ಧಾರ” ಎಂದು ಮೂವರು ಯುವತಿಯರು ಹೇಳುತ್ತಿರುವಂತೆ ಕಾಣುತ್ತದೆ.

 ಅಲ್ಲದೆ, ದಶರಥ ಮಹಾರಾಜರಿಗೆ ಮೂವರು ರಾಣಿಯರಿದ್ದರು ಎಂದು ಉದಾಹರಣೆ ನೀಡುತ್ತಾ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಳ್ಳುತ್ತಿರುವ ದೃಶ್ಯಗಳೂ ವಿಡಿಯೋದಲ್ಲಿವೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST