ಬೆಂಗಳೂರು: ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಒಂದೇ ಕುಟುಂಬದ ಮೂವರು ಬಲಿಯಾಗಿದ್ದಾರೆ. ಹೊಸಕೋಟೆ ಸೂಲಿಬೆಲೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ತಂದೆ, ತಾಯಿ ಹಾಗೂ ಮಗಳು ಬಲಿಯಾಗಿದ್ದಾರೆ.
35 ವರ್ಷದ ಅರುಣ್, 32 ವರ್ಷದ ಅನುಷಾ, ಹಾಗೂ ಆರ್ನಾ(2) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಮತ್ತೊಬ್ಬ ಪುತ್ರಿ ಅನುಶಿಕಾ(5) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೂಲಿಬೆಲೆಯಿಂದ ಹೊಸಕೋಟೆ ಕಡೆಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ ದೇವನಹಳ್ಳಿ ಕಡೆಗೆ ಇಬ್ಬರು ಮಕ್ಕಳ ಜೊತೆಗೆ ಬೈಕ್ ನಲ್ಲಿ ಹೋಗುತ್ತಿದ್ದ ದಂಪತಿಗೆ ಡಿಕ್ಕಿ ಹೊಡೆದಿದೆ.
ರಾಂಗ್ ರೂಟ್ ನಲ್ಲಿ ಬಂದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ದಂಪತಿ, ಮಗು ಮೃತಪಟ್ಟಿದ್ದಾರೆ. ಮೃತರು ದೇವನಹಳ್ಳಿ ತಾಲೂಕಿನ ತೆಲ್ಲಾಹಳ್ಳಿ ಗ್ರಾಮದ ನಿವಾಸಿಗಳಾಗಿದ್ದಾರೆ. ಸ್ಥಳಕ್ಕೆ ಸೂಲಿಬೆಲೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


