Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತ

Advertisement
ರಾಯಚೂರು : ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದ್ದು, ಮೃತರು ರಮಝಾನ್ ಹಿನ್ನೆಲೆ ನಮಾಜ್‌ಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಮೃತರನ್ನು ಮೊಹಮದ್ ಅಲಿ ಪಾಶಾ (24), ನೂರ ಮೊಹಮದ್ (19) ಮತ್ತು ಫಯಾಜ್ (26) ಎಂದು ಗುರುತಿಸಲಾಗಿದೆ. ಇವರು ಮೂವರೂ ನಗರದ ಸುಖಾಣಿ ಕಾಲೋನಿ ನಿವಾಸಿಗಳಾಗಿದ್ದಾರೆ. ಯುವಕರ ಸಾವಿನಿಂದ ಕುಟುಂಬಸ್ಥರಲ್ಲಿ ಆಕ್ರಂದನ ಮೇಳೈಸಿದ್ದು, ಕಾಲೋನಿಯಲ್ಲಿ ಶೋಕ ವಾತಾವರಣ ಆವರಿಸಿದೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಗಂಜ್ ವೃತ್ತದ ದಿಕ್ಕಿನಿಂದ ಬರುತ್ತಿದ್ದ ಟ್ರಕ್, ಲಿಂಗಸುಗೂರು ರಸ್ತೆಯ ದಿಕ್ಕಿನಿಂದ ವೇಗವಾಗಿ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದ್ದು, ಸವಾರರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅಪಘಾತದ ಶಬ್ದಕ್ಕೆ ಸ್ಥಳೀಯರು ಓಡಿ ಬಂದು ನೋಡಿದಾಗ ರಕ್ತದ ಕೆರೆಯಲ್ಲಿ ಮೂವರು ಬಿದ್ದಿರುವುದು ಕಂಡುಬಂದಿದೆ.

ವರದಿ : ಗಾರಲದಿನ್ನಿ ವೀರನಗೌಡ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ