ಚಿಕ್ಕಮಗಳೂರು : ಟಿಪ್ಪು ಸುಲ್ತಾನ್ ಕಟೌಟ್ ಗೆ ಪಾಕಿಸ್ತಾನ ಪರ ಇರುವ ಸಾಂಗ್ ಬಳಸಿ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಲಾಗಿದ್ದು, ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತಂತೆ ಸುಮೋಟೋ ಕೇಸ್ ದಾಖಲಾಗಿದೆ. ಪವರ್ ಟಿಪ್ಪು ಬಾಯ್ಸ್ ಇನ್‌ಸ್ಟಾಗ್ರಾಮ್ ಪೇಜ್ ವಿರುದ್ಧ ಇದೀಗ ಎಫ್‌ಐಆರ್ ದಾಖಲಾಗಿದೆ.
ದೇಶ ವಿರೋಧಿ ಕೃತ್ಯ ಕೋಮು ಪ್ರಚೋದನೆಯಡಿ ದಾಖಲಾಗಿದೆ. ಈದ್ ಮಿಲಾದ್ ಹಿನ್ನೆಲೆಯಲ್ಲಿ ಚಿಕ್ಕಮಂಗಳೂರಲ್ಲಿ ಟಿಪ್ಪು ಕಟೌಟ್ ಹಾಕಲಾಗಿದ್ದು, ನಗರದ ಟಿಪ್ಪು ನಗರದಲ್ಲಿ ಈ ಒಂದು ಕಟೌಟ್ ಹಾಕಲಾಗಿದೆ.
ಕಟ್ ಔಟ್ ವಿಡಿಯೋಗೆ ಪಾಕಿಸ್ತಾನ ಪರ ಹಾಡು ಬಳಸಿ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಲಾಗಿತ್ತು ಸದ್ಯಕ್ಕೆ ಪ್ರಕರಣ ದಾಖಲಿಸಿಕೊಂಡು ಚಿಕ್ಕಮಗಳೂರು ಠಾಣೆ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.


