Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಲ್ವರು ಯುವಕರಿಂದ ಪ್ರೇಮದ ಅಪಪ್ರಚಾರ : ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ

Advertisement
ಮಂಡ್ಯ: ನಾಲ್ವರು ಯುವಕರಿಂದ ಪ್ರೀತಿ, ಪ್ರೇಮದ ಅಪಪ್ರಚಾರ ಹಾಗೂ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಂಡ್ಯದ ಹನಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ.

ಇಂಪನಾ (14) ಆತ್ಮಹತ್ಯೆ ಮಾಡಿಕೊಂಡವಳು.ಗಗನ್, ಸಂಜಯ್ ,ಮಹೇಂದ್ರ ಹಾಗೂ ಲೋಹಿತ್ ಎಂಬ ಯುವಕರಿಂದ ಕಿರುಕುಳದ ಆರೋಪ ಕೇಳಿ ಬಂದಿದೆ. ಹನಕೆರೆ ಗ್ರಾಮದ ಗಗನ್ ಮತ್ತು ಸ್ನೇಹಿತರು ಸೇರಿ ಇಂಪನಾ- ಮಹೇಂದ್ರ ಎಂಬಾತನನ್ನು ಪ್ರೀತಿ ಮಾಡುತ್ತಿದ್ದಾಳೆ ಎಂದು ಗಾಳಿ ಸುದ್ದಿ ಹಬ್ಬಿಸಿದ್ದರು.

ಅಲ್ಲದೆ ಆಕೆ ಮಾತಾಡುವುದನ್ನು ರೆಕಾರ್ಡ್ ಮಾಡಿಕೊಂಡು ವೈರಲ್ ಮಾಡಿದ್ದರು. ಇದರಿಂದ ಬೇಸತ್ತ ಇಂಪನಾ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅದೇ ಗ್ರಾಮದ ಖಾಸಗಿ ಶಾಲೆಯಲ್ಲಿ ಇಂಪನಾ 9ನೇ ತರಗತಿ ಓದುತ್ತಿದ್ದಳು.

ಒಬ್ಬಳೇ ಮಗಳನ್ನು ಕಳೆದುಕೊಂಡು ಇಂಪನಾ ಹೆತ್ತವರು ಕಣ್ಣೀರು ಹಾಕುತ್ತಿದ್ದಾರೆ. ಗಗನ್ ಸೇರಿ ನಾಲ್ವರು ತನ್ನ ಮಗಳಿಗೆ ಕಿರುಕುಳ ನೀಡಿ ಆಕೆಯ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ನಾಲ್ವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ