Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು 3,000 ಸಾವಿರ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ

Advertisement
ಬೆಳಗಾವಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಇಂದು 3,000 ಸಾವಿರ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಐತಿಹಾಸಿಕ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದೆ. 3000 ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ, ವಿಕಲಚೇತನರಿಗೆ ವಿವಿಧ ಸಲಕರಣೆಗಳ ವಿತರಣೆ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಬೆಳಗಾವಿ ಸಿಪಿಎಡ್ ಮೈದಾನದಲ್ಲಿ ಮಾರ್ಚ್ 24ರಂದು ಬೆಳಿಗ್ಗೆ 3000 ಗರ್ಭಿಣಿಯರಿಗೆ ಸೀರೆ, ಹೂವು, ಹಣ್ಣು ಕಾಯಿ, ಅರಿಶಿನ-ಕುಂಕುಮ, ಬಳೆ ಹೀಗೆ ಪಂಚ ಬಗೆಯ ಮಂಗಳಕರ ಸಾಮಗ್ರಿಗಳನ್ನೊಳಗೊಂಡು ಉಡಿ ತುಂಬುವ ಶಾಸ್ತ್ರದೊಂದಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ.

ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ 1000 ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಕಾರ್ಯಕ್ರಮದಲ್ಲಿ ಭಾಗವಹಿಸಲ್ಲಿದ್ದು, ವಿಕಲಚೇತನರಿಗೆ - ತ್ರಿಚಕ್ರ ಸ್ಕೂಟರ್ ವಿತರಣೆ ಮಾಡಲಾಗುವುದು ಎಂದರು.

ಇನ್ನು ಸ್ತ್ರೀಶಕ್ತಿ ಗುಂಪುಗಳನ್ನು ಉತ್ತೇಜಿಸಲು ವಿಭಾಗೀಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆ ಮೇಳವನ್ನು ಆಯೋಜಿಸಲಾಗಿದ್ದು, ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಕಾರವಾರ, ಗದಗ ಹಾಗೂ ಧಾರವಾಡ ಹೀಗೆ 7 ಜಿಲ್ಲೆಗಳ ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ಮತ್ತು ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಮ್ ಅಡಿ ಸ್ತ್ರೀ ಶಕ್ತಿ ಗುಂಪುಗಳು ಪಾಲ್ಗೊಂಡು ಸದರಿ ಮಳಿಗೆಗಳಲ್ಲಿ ವಿವಿಧ ಕರಕುಶಲ ವಸ್ತುಗಳ ಪ್ರದರ್ಶನ, ಬಟ್ಟೆ ವ್ಯಾಪಾರ, ತಿಂಡಿ-ತಿನಿಸುಗಳ ವ್ಯಾಪಾರ, ಲಂಬಾಣಿ ಉಡುಪು, ಬಿದಿರಿನಿಂದ ತಯಾರಿಸಿದ ವಸ್ತುಗಳು, ವಿವಿಧ ರೀತಿಯ ಬ್ಯಾಗಗಳು ಇತ್ಯಾದಿ ವಸ್ತುಗಳನ್ನು ಪ್ರದರ್ಶಿಸಲು ಹಾಗೂ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ