Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೇವಣ್ಣ ಕುಟುಂಬಕ್ಕೆ ಇಂದು ಮಹತ್ವದ ದಿನ : ಜೈಲಾ..? ಬೇಲಾ..? 

Advertisement
ಬೆಂಗಳೂರು : ಅಶ್ಲೀಲ ವಿಡಿಯೋ, ಅತ್ಯಾಚಾರ ಹಾಗೂ ಕಿಡ್ನ್ಯಾಪ್ ಪ್ರಕರಣಗಳನ್ನು ಎದುರಿಸುತ್ತಿರುವ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ಕುಟುಂಬಕ್ಕೆ ಇಂದು ಮಹತ್ವದ ದಿನವಾಗಿದೆ. ಮೂವರಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಹಾಗೂ ಹೈಕೋರ್ಟ್ನಲ್ಲಿ ನಡೆಯಲಿದೆ.

ಹೌದು, ಜೆಡಿಎಸ್ ನಾಯಕರಾದ ಹೆಚ್ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಹಾಗೂ ಪುತ್ರ ಪ್ರಜ್ವಲ್ ರೇವಣ್ಣಗೆ ಇಂದು ಮಹತ್ವದ ದಿನವಾಗಿದೆ.

ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ನೀಡಿರುವ ಜಾಮೀನು ರದ್ದು ಕೋರಿ ಎಸ್ ಐ ಟಿ ಅಧಿಕಾರಿಗಳು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಹೆಚ್.ಡಿ ರೇವಣ್ಣಗೆ ಜಾಮೀನು ನೀಡಬಾರದು, ಈಗ ನೀಡಿರುವ ಜಾಮೀನನ್ನು ರದ್ದುಪಡಿಸಬೇಕೆಂದು ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಸಂಬಂಧ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.

ಅದೇ ರೀತಿ ಪ್ರಜ್ವಲ್ ರೇವಣ್ಣ ಹಾಗೂ ಭವಾನಿ ರೇವಣ್ಣ ಅವರ ಜಾಮೀನು ವಿಚಾರಣೆ ಇಂದು ನಡೆಯಲಿದ್ದು, ಕೋರ್ಟ್ ಇಂದು ವಾದ ವಿವಾದಗಳನ್ನು ಆಲಿಸಿ ತೀರ್ಪು ಪ್ರಕಟಿಸಲಿದೆ. ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಬಂಧನದ ಭೀತಿ ಎದುರಿಸುತ್ತಿದ್ದಾರೆ.

ಭವಾನಿ ನಿರೀಕ್ಷಣಾ ಜಾಮೀನು ಅರ್ಜಿಯ ಆದೇಶ ಇಂದು ಹೊರಬೀಳಲಿದೆ. ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಹೆಚ್ಡಿ ರೇವಣ್ಣಗೆ ಜಾಮೀನು ಸಿಕ್ಕಿದರೂ ಅದನ್ನು ಪ್ರಶ್ನಿಸಿ ಎಸ್‌ಐಟಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ