ಹುಮನಾಬಾದ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಇಂದು ಜೂಲೈ 31ರಂದು ಶುಕ್ರವಾರ ಪತ್ರಿಕಾ ದಿನಾಚರಣೆ ಆಯೋಜನೆ ಮಾಡಲಾಗಿದೆ ಎಂದು ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಂಜೀವಕುಮಾರ ಜುನ್ನಾ ತಿಳಿಸಿದರು. ಇಲ್ಲಿಯ ಬಾಲಾಜಿ ಮಂದಿರ ಹತ್ತಿರದ ಜೆ.ಬಿ.ಶಿಕ್ಷಣ ಸಂಸ್ಥೆಯಲ್ಲಿ ಮಧ್ಯಾಹ್ನ 2 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು,ಈ ಕಾರ್ಯಕ್ರಮಕ್ಕೆ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ರೇಣುಕಾ ವೀರಗಾಂಗಧರ್ ಶಿವಾಚಾರ್ಯರು, ಸಂಘದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಸ್ವಾಮಿ, ರಾಜ್ಯ ಕಾರ್ಯಕಾರಣಿ ಸದಸ್ಯ ಅಪ್ಪರಾವ್ ಸೌದಿ,ಜಿಲ್ಲಾ ಕಾರ್ಯಕಾರಣಿ ಸದಸ್ಯ ದುರ್ಯೋದನ ಹೂಗಾರ ಹಾಗೂ ತಹಶೀಲ್ದಾರ್ ಜಗದೀಶ್ ಚೌರಾ,ಡಿವೈಎಸ್ಪಿ ಮಡೋಳಪ್ಪ ಪಿ.ಎಸ್. ತಾಪಂ ಇಒ ದೀಪಿಕಾ ನಾಯ್ಕರ್,ಪುರಸಭೆ ಮುಖ್ಯಾಧಿಕಾರಿ ವನಿತಾಬಾಯಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


