Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ : ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಭೇಟಿ

Advertisement
ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ.

ಹೊಯ್ಸಳ ದ್ರಾವಿಡ ಶೈಲಿಯಲ್ಲಿ ಶಿಲ್ಪಕಲೆಯಿಂದ ಸುಮಾರು 100 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಶ್ರೀ ಭೈರವೈಕ್ಯ ಮಂದಿರ ಉದ್ಘಾಟಿಸಲಿದ್ದಾರೆ.

ಬುಧವಾರ ಬೆಳಗ್ಗೆ 11:30 ಕ್ಕೆ ಪ್ರಧಾನಿ ಮೋದಿ ಅವರಿಂದ ಶ್ರೀ ಕ್ಷೇತ್ರದ ಡಾ. ಬಾಲಗಂಗಾಧರನಾಥ ಶ್ರೀಗಳ ಶ್ರೀ ಗುರುಭೈರವೈಕ್ಯ ಮಂದಿರ ಲೋಕಾರ್ಪಣೆಗೊಳ್ಳಲಿದೆ.

ನಾಥ ಪರಂಪರೆಯ ಧಾರ್ಮಿಕ ಮತ್ತು ಆಧ್ಯಾತ್ಮಿಕ ಪುಣ್ಯಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ದೇಶದ ಪ್ರಧಾನಿ ಮೊದಲ ಬಾರಿ ಭೇಟಿ ನೀಡುತ್ತಿದ್ದಾರೆ.

ಬೆಳಗ್ಗೆ 10:55ಕ್ಕೆ ಆದಿಚುಂಚನಗಿರಿ ಕ್ಷೇತ್ರದ ತಪೋವನ ಆವರಣದಲ್ಲಿರುವ ಹೆಲಿಪ್ಯಾಡ್ ಗೆ ಮೋದಿ ಬಂದಿಳಿಯಲಿದ್ದಾರೆ. 1.5 ಕಿಲೋಮೀಟರ್ ವರೆ ಎಸ್ಪಿಜಿ ಭದ್ರತೆಯಲ್ಲಿ ರಸ್ತೆ ಮಾರ್ಗವಾಗಿ ಕಾರಿನಲ್ಲಿ ಬಂದು ಶ್ರೀ ಕ್ಷೇತ್ರ ಕಾಲಭೈರವೇಶ್ವರ ದೇವಾಲಯ ಪಕ್ಕದಲ್ಲಿ ನಿರ್ಮಿಸಿದ ಶ್ರೀ ಗುರುಭೈರವೈಕ್ಯ ಮಂದಿರ ಉದ್ಘಾಟಿಸಲಿದ್ದಾರೆ.

ಬಾಲಗಂಗಾಧರನಾಥ ಶ್ರೀಗಳ ಪಾದುಕೆಗೆ ನಮಸ್ಕರಿಸಿ ಶ್ರೀಗಳ ಪುತ್ಥಳಿ ಇರುವ ಭವ್ಯ ಧ್ಯಾನ ಮಂದಿರ, ನೆಲ ಮಹಡಿಲ್ಲಿರುವ ಗರ್ಭಗುಡಿಯಲ್ಲಿ ಪೂಜೆ ಸಲ್ಲಿಸಿ ಪ್ರದಕ್ಷಿಣೆ ಹಾಕಿದ ನಂತರ ಕ್ಷೇತ್ರದ ಕಾಲಭೈರವೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ಆಯೋಜಿಸಿರುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ