Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಬಾಗಲಕೋಟೆ, ದಾವಣಗೆರೆಯಲ್ಲಿ ಸಿದ್ದರಾಮಯ್ಯ ಭರ್ಜರಿ ಪ್ರಚಾರ

Advertisement
ಬೆಂಗಳೂರು: ಏಪ್ರಿಲ್ 9ರಂದು ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ.

ಇಂದು ಎರಡೂ ಕ್ಷೇತ್ರಗಳಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯಲ್ಲಿ ಸಿಎಂ ಪ್ರಚಾರ ನಡೆಸಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ.

ಮೊದಲು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿರುವ ಸಿಎಂ ಬೆಳಿಗ್ಗೆ 11.15ಕ್ಕೆ ದಾವಣಗೆರೆಯ ಎಂಬಿಎ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ.

ನಂತರ ದುರ್ಗಾಂಬಿಕಾ ದೇವಸ್ಥಾನದ ಬಳಿ ಪ್ರಚಾರ ಸಭೆ ನಡೆಸಲಿದ್ದಾರೆ. ನಂತರ ಆಜಾದ್ ನಗರ, ಭಾಷಾ ನಗರ ಸೇರಿದಂತೆ ಹಲವು ಕಡೆ ಸಿಎಂ ರೋಡ್ ಶೋ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಂ.ಬಿ. ಪಾಟೀಲ್, ಈಶ್ವರ್ ಖಂಡ್ರೆ ಸೇರಿ ಹಲವು ನಾಯಕರು ಸಾಥ್ ನೀಡಲಿದ್ದಾರೆ. ಮೊನ್ನೆ ದಾವಣಗೆರೆ ಗ್ರಾಮೀಣ ಪ್ರದೇಶದಲ್ಲಿ ಸಿಎಂ ಪ್ರಚಾರ ನಡೆಸಿದ್ದರು. ಇಂದು ದಾವಣಗೆರೆ ನಗರದಲ್ಲಿ ಪ್ರಚಾರ ಕೈಗೊಂಡಿದ್ದಾರೆ.

ದಾವಣಗೆರೆಯಲ್ಲಿ ಪ್ರಚಾರ ನಡೆಸಿದ ನಂತರ ಬಾಗಲಕೋಟೆಗೆ ತೆರಳಲಿದ್ದಾರೆ. ಸಂಜೆ 5:40ಕ್ಕೆ ಬಾಗಲಕೋಟೆಗೆ ಆಗಮಿಸಲಿರುವ ಸಿಎಂ ಬಾಗಲಕೋಟೆಯಲ್ಲಿ ಮೂರನೇ ಹಂತದ ಪ್ರಚಾರ ನಡೆಸಲಿದ್ದಾರೆ.

ಬಸವೇಶ್ವರ ವೃತ್ತದಲ್ಲಿ ನಡೆಯುವ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಇಂದು ಬಾದಾಮಿಯಲ್ಲಿಯೇ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬಾದಾಮಿಯಿಂದ ಹುಬ್ಬಳ್ಳಿ ಮಾರ್ಗವಾಗಿ ಬೆಂಗಳೂರಿಗೆ ತೆರಳಲಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ