Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ದೆಹಲಿ ವಿಧಾನಸಭಾ ಚುನಾವಣೆ ಮತ ಎಣಿಕೆ : ಎಲ್ಲರ ಚಿತ್ತ ದೆಹಲಿಯತ್ತ

Advertisement
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಅಧಿಕಾರಿಗಳು ಮತ ಎಣಿಕೆ ಕೇಂದ್ರದತ್ತ ಆಗಮಿಸಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಸ್ಟ್ರಾಂಗ್ ರೂಮ್ ಓಪನ್ ಆಗಲಿದೆ.

ಮತಎಣಿಕೆ ಕೇಂದ್ರದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.rಎಣಿಕೆ ಟ್ರಯಲ್ ರನ್ ಕೂಡ ಮುಗಿದಿದ್ದು, ಸ್ಟ್ರಾಂಗ್ ರೂಮ್ ಓಪನ್ ಬಳಿಕ ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಯಲಿದೆ.

ಬೆಳಿಗ್ಗೆ 8 ಗಂಟೆಗೆ ಎಣಿಕೆ ಆರಂಭವಾಗಲಿದೆ. 5,000 ತರಬೇತಿ ಪಡೆದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.ಶೇ. 60.42 ರಷ್ಟು ಮತದಾನ ದಾಖಲಾಗಿತ್ತು.

ಆಡಳಿತರೂಢ ಎಎಪಿ ಸತತ ಮೂರನೇ ಬಾರಿಗೆ ಅಧಿಕಾರ ಹಿಡಯುವ ಕನಸು ಕಾಣುತ್ತಿದ್ದು, ಹ್ಯಾಟ್ರಿಕ್‌ ಜಯದ ನಿರೀಕ್ಷೆಯಲ್ಲಿದೆ. ಬರೋಬ್ಬರಿ 27 ವರ್ಷಗಳ ಕಾಲ ಅಧಿಕಾರದಿಂದ ದೂರ ಉಳಿದಿದ್ದ ಬಿಜೆಪಿಯೂ ಈ ಬಾರೀ ಅಧಿಕಾರದ ಗದ್ದುಗೆ ಏರಲು ಹವಣಿಸುತ್ತಿದ್ದರೆ, ಕೈ ಪಡೆಯೂ ಸಹ ಜಯ ನಮ್ಮದೆ ಎನ್ನುವ ಲೆಕ್ಕಾಚಾರವನ್ನ ಹಾಕಿಕೊಂಡಿದೆ.

13ಕ್ಕೂ ಹೆಚ್ಚು ಮತಗಟ್ಟೆ ಸಮೀಕ್ಷೆಗಳಲ್ಲಿ ಬಿಜೆಪಿ 35 ರಿಂದ 60 ಸ್ಥಾನಗಳವರೆಗೆ ಗೆಲ್ಲಬಹುದು ಎಂದು ಅಂದಾಜು ಮಾಡಲಾಗಿದೆ. ಹೀಗಾಗಿ ಈ ಬಾರಿ ಬಿಜೆಪಿ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗಿದೆ.

ದಿಲ್ಲಿಯಲ್ಲಿ 70 ವಿಧಾನಸಭಾ ಕ್ಷೇತ್ರಗಳಿದ್ದು, 36 ಅಥವಾ ಅದಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಜಯ ಗಳಿಸುವ ಪಕ್ಷ ಅಧಿಕಾರಕ್ಕೇರಲಿದೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ