ಬೆಂಗಳೂರು: ರಾಜ್ಯ ಸರಕಾರದ ಎಲ್ಲ ಸಿಬಂದಿ, ನೌಕರರೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಮಂಗಳವಾರ ಸಂವಾದ ನಡೆಸಲಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಕ್ವೆಟ್ ಹಾಲ್‌ನಲ್ಲಿ ಸಿಎಂ, ಸರಕಾರದ ಎಲ್ಲ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಭಾಗವಹಿಸುತ್ತಾರೆ.
ಎಲ್ಲ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ನೌಕರರು ಆಯಾ ಜಿಲ್ಲಾ, ತಾಲೂಕು ಹಾಗೂ ಹೋಬಳಿ ಮಟ್ಟದ ಸ್ಥಳಗಳಿಂದಲೇ ವೀಡಿಯೋ ಮೂಲಕ ಸಂವಾದದಲ್ಲಿ ಭಾಗವಹಿಸಬೇಕು ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಡಾ| ಶಾಲಿನಿ ರಜನೀಶ್ ತಿಳಿಸಿದ್ದಾರೆ.


