LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Entertainment News

ಮೊದಲ ದಿನವೇ ಗಳಿಕೆಯಲ್ಲಿ ದಾಖಲೆ ಬರೆದ 'ಟಾಕ್ಸಿಕ್': 125 ಕೋಟಿ ರೂ. ಕಲೆಕ್ಷನ್

Advertisement

ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಟಾಕ್ಸಿಕ್' ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಬಿಡುಗಡೆಯಾದ ಮೊದಲ ದಿನವೇ 125 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ. 'ಧುರಂಧರ್ 2' ಬಳಿಕ ಮೊದಲ ದಿನವೇ 100 ಕೋಟಿ ಗಳಿಸಿದ ಈ ವರ್ಷದ ಎರಡನೇ ಭಾರತೀಯ ಸಿನಿಮಾ ಟ್ಯಾಕ್ಸಿಕ್ ಆಗಿದೆ.

ದೇಶ ವಿದೇಶಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿರುವ ಟಾಕ್ಸಿಕ್ ವಿಶ್ವದಾದ್ಯಂತ 125 ಕೋಟಿ ರೂ.ಗೂ ಅಧಿಕ ಗಳಿಕೆ ಕಂಡಿದೆ ಎಂದು ಅಂದಾಜಿಸಲಾಗಿದೆ. ಭಾರತದಲ್ಲಿ ಟ್ಯಾಕ್ಸಿಕ್ 90 ರಿಂದ 95 ಕೋಟಿ ರೂ. ಕಲೆಕ್ಷನ್ ಮಾಡಿದೆ.

ಯಾವುದೇ ಪ್ರೀಮಿಯರ್ ಶೋ ,ಸೆಲೆಬ್ರಿಟಿ ಶೋಗಳಿಲ್ಲದೆ ಆರು ಭಾಷೆಗಳಲ್ಲಿ ಬಿಡುಗಡೆಯಾಗಿರುವ ಟಾಕ್ಸಿಕ್ ಕನ್ನಡ ಭಾಷೆಯಲ್ಲಿ 20 ಕೋಟಿ ರೂ.ಗೂ ಅಧಿಕ ಗಳಿಕೆ ಕಂಡಿದೆ.

ಹಿಂದಿ ಭಾಷೆಯಲ್ಲಿ 50 ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್ ಮಾಡಿದೆ. ತೆಲುಗು ಭಾಷೆಯಲ್ಲಿ 11 ಕೋಟಿ ರೂ,ಗೂ ಅಧಿಕ ಗಳಿಕೆ ಕಂಡಿದೆ. 'ಧುರಂಧರ್ 2' 140.6 ಕೋಟಿ ರೂ. ಗಳಿಕೆ ಮೂಲಕ ಮೊದಲ ದಿನವೇ ಅತ್ಯಧಿಕ ಗಳಿಕೆ ದಾಖಲಿಸಿದ್ದು, ಎರಡನೇ ಸ್ಥಾನದಲ್ಲಿ 'ಟಾಕ್ಸಿಕ್' 125 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ. ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಂಡಿರುವ ಟಾಕ್ಸಿಕ್ ಗಳಿಕೆಯಲ್ಲಿ ಹೊಸ ದಾಖಲೆ ಬರೆಯುವ ಸಾಧ್ಯತೆ ಇದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತರಬೇತಿಯಲ್ಲಿದ್ದ ವಿಮಾನ ಪತನ : ಕನ್ನಡಿಗ ಸೇರಿ ಇಬ್ಬರು ಪೈಲಟ್‌ಗಳು ಸಾವು ಧಾರವಾಡದಲ್ಲಿ ಪತ್ನಿಗೆ ಚಾಕು ಇರಿದು ಕೊಂದು ಪತಿ ನೇಣಿಗೆ ಶರಣುಸಿದ್ದರಾಮಯ್ಯ ಭೇಟಿಯಾದ ರಮೇಶ್ ಜಾರಕಿಹೊಳಿ : ಕುತೂಹಲ ಮೂಡಿಸಿದ ಮಾತುಕತೆಮಹಿಳಾ ವಿಶ್ವಕಪ್ ಹಾಕಿ: ಭಾರತ ತಂಡಕ್ಕೆ 5 ನೇ ಸ್ಥಾನ ಲಾಡ್ಸ್ ಟೆಸ್ಟ್ : ಇಂಗ್ಲೆಂಡ್ ವಿರುದ್ಧ ಪಾಕ್ ಉತ್ತಮ ಆರಂಭಬಾಕ್ಸ್ ಆಫೀಸ್‌ನಲ್ಲಿ ಟಾಕ್ಸಿಕ್ ಸುನಾಮಿ : ಮೊದಲ ದಿನದ ಕಲೆಕ್ಷನ್ ಬಗ್ಗೆ​​​ ಅಧಿಕೃತ ಘೋಷಣೆ ಸಾಕ್ಷಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿದ್ದ ಪೊಲೀಸರು :  3 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್7.5% ಮೀಸಲಾತಿಯನ್ನು 9ನೇ ಅನುಸೂಚಿಗೆ ಸೇರಿಸಲು ಒಗ್ಗಟ್ಟಿನ ಹೋರಾಟ ಅಗತ್ಯ: ಶರಣಬಸವ ನಾಯಕ ಜಾನೇಕಲ್ಆಡಳಿತ ವ್ಯವಸ್ಥೆ ಪರಿಚಯ ಕಾರ್ಯಕ್ರಮದಡಿಯಲ್ಲಿ  ಕಂದಾಯ ಇಲಾಖೆಗೆ ಭೇಟಿ ನೀಡಿದ ವಿದ್ಯಾರ್ಥಿಗಳುಕಳ್ಳರ ಕೈಚಳಕ: ದೇವರಿಗೇ ಕನ್ನ ಹಾಕಿದ ಕದೀಮರು