Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಘಟಪ್ರಭಾ ನದಿಗೆ ಬಿದ್ದ ಟ್ರ್ಯಾಕ್ಟರ್ : ಓರ್ವ ನದಿ ಪಾಲು, 12 ಜನ ಪಾರು 

Advertisement
ಬೆಳಗಾವಿ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಗೆ ಟ್ರ್ಯಾಕ್ಟರ್ ಮುಗುಚಿ ಬಿದ್ದಿದೆ. ಘಟನೆಯಲ್ಲಿ ಓರ್ವ ನಾಪತ್ತೆಯಾಗಿದ್ದು, ಉಳಿದ 12 ಜನ ಪ್ರಾಣಪಾಯದಿಂದ ಪಾರಾಗಿದ್ದಾರೆ. ನಾಪತ್ತೆಯಾಗಿರುವ ಓರ್ವನಿಗೆ ಇದೀಗ ಶೋಧ ಕಾರ್ಯ ಮುಂದುವರಿದಿದೆ.

ಕಾರ್ಮಿಕರು ಬಾಗಲಕೋಟೆ ಜಿಲ್ಲೆಯ ನಂದಗಾಂವ್ ಗ್ರಾಮದಿಂದ ಮೂಡಲಗಿ ತಾಲೂಕಿನ ಅವರಾದಿ ಗ್ರಾಮಕ್ಕೆ ತೆರಳುತ್ತಿದ್ದರು. ಅವರಾದಿ ಗ್ರಾಮದ ಬಳಿ ಘಟಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಮ್ ಬ್ಯಾರೇಜ್ ಕಟ್ಟಲಾಗಿದೆ.

ಘಟಪ್ರಭಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಸೇತುವೆ ಮೇಲೆ ಮೂರು ಅಡಿ ನೀರು ಹರಿಯುತ್ತಿದೆ. ಆದರೂ, ಕೂಡ ಚಾಲಕ ಟ್ರ್ಯಾಕ್ಟರ್​​ ನಿಲ್ಲಿಸದೆ ಬ್ರಿಡ್ಜ್​ ಮೇಲೆ ಹೋಗಿದ್ದಾನೆ.

ಈ ವೇಳೆ ಟ್ರ್ಯಾಕ್ಟರ್​ನಲ್ಲಿ ಪ್ರಯಾಣಿಸುತ್ತಿದ್ದ 13 ಜನರ ಪೈಕಿ ಹನ್ನೆರಡು ಮಂದಿ ಈಜಿ ಸಾವಿನ ದವಡೆಯಿಂದ ಪಾರಾಗಿದ್ದಾರೆ‌. ಆದರೆ, ಓರ್ವ ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಸ್ಥಳಕ್ಕೆ ಕುಲಗೋಡ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಘಟಪ್ರಭಾ ನದಿಯಲ್ಲಿ ನಾಪತ್ತೆಯಾದ ಕಾರ್ಮಿಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ