LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಘೋರ ದುರಂತ: ಅರಬ್ಬಿ ಸಮುದ್ರದಲ್ಲಿ ಮುಳುಗಿ 8 ಮಂದಿ ವಿದ್ಯಾರ್ಥಿಗಳು ಸಾವು 

Advertisement

ರಾಯಗಢ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ದಿವೇಆಗರ್ ಬೀಚ್‌ನಲ್ಲಿ ಪುಣೆಯ ಖಾಸಗಿ ಕೋಚಿಂಗ್ ಅಕಾಡೆಮಿಯ ಪ್ರವಾಸ ದುರಂತದಲ್ಲಿ ಅಂತ್ಯಗೊಂಡಿದೆ.

ಸಮುದ್ರದಲ್ಲಿ ಈಜಲು ತೆರಳಿದ್ದ 8 ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರ ಎಲ್ಲಾ 8 ಶವಗಳನ್ನು ಹೊರತೆಗೆಯಲಾಗಿದ್ದು, ಅವರು ಮೃತಪಟ್ಟಿರುವುದಾಗಿ ಘೋಷಿಸಲಾಗಿದೆ.

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ದಿವೇಆಗರ್ ಬೀಚ್‌ನಲ್ಲಿ ಭೀಕರ ದುರಂತ ಸಂಭವಿಸಿದ್ದು, ಪುಣೆಯ ಆಳಂದಿಯ ಖಾಸಗಿ ಕೋಚಿಂಗ್ ಸಂಸ್ಥೆಯ ಪ್ರವಾಸಕ್ಕೆ ತೆರಳಿದ್ದ 16 ವರ್ಷದ 8 ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

48 ಮಂದಿಯ ತಂಡದಲ್ಲಿದ್ದ ವಿದ್ಯಾರ್ಥಿಗಳು ಈಜಲು ಸಮುದ್ರಕ್ಕೆ ಇಳಿದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಬಳಿಕ ಎಲ್ಲಾ 8 ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಪುಣೆಯ ಆಳಂದಿಯ Winners Academy for 11th & 12th ಕೋಚಿಂಗ್ ಸಂಸ್ಥೆಯಿಂದ 48 ಮಂದಿಯ ತಂಡ ದಿವೇಆಗರ್‌ನ ದಿಘಿ ಸಾಗರಿ ಪ್ರದೇಶಕ್ಕೆ ಪ್ರವಾಸ ತೆರಳಿತ್ತು. ತಂಡದಲ್ಲಿ 25 ಬಾಲಕರು, 17 ಬಾಲಕಿಯರು ಹಾಗೂ 6 ಶಿಕ್ಷಕರು ಇದ್ದರು.

ಪ್ರವಾಸದ ವೇಳೆ ವಿದ್ಯಾರ್ಥಿಗಳು ಸಮುದ್ರಕ್ಕೆ ಇಳಿದು ಈಜಲು ಮುಂದಾಗಿದ್ದಾರೆ. ಈ ವೇಳೆ ಸಮುದ್ರದ ನೀರಿನ ಆಳ ಹಾಗೂ ಅಲೆಗಳ ರಭಸವನ್ನು ಸರಿಯಾಗಿ ಅಂದಾಜಿಸಲು ಸಾಧ್ಯವಾಗದೆ 8 ವಿದ್ಯಾರ್ಥಿಗಳು ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST