ಬೆಂಗಳೂರು : ಸ್ಯಾಡಲ್‌ವುಡ್‌ನಿಂದ ಹಾಲಿವುಡ್‌ವರೆಗೂ ನಿರೀಕ್ಷೆ ಮೂಡಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಲಿದೆ. ಟ್ರೈಲರ್ ಬಿಡುಗಡೆ ಸಮಯವನ್ನು ಚಿತ್ರತಂಡ ಇದೀಗ ಅಧಿಕೃತವಾಗಿ ಘೋಷಿಸಿದೆ.
ಚಿತ್ರತಂಡ ಹಂಚಿಕೊಂಡಿರುವ ಹೊಸ ಪೋಸ್ಟರ್‌ನಲ್ಲಿ ಭಾರೀ ಸ್ಫೋಟ ಮತ್ತು ಬೆಂಕಿಯ ನಡುವೆ ಯಶ್ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಪೋಸ್ಟರ್‌ನಲ್ಲಿ 'TRAILER 7:01 PM' ಎಂದು ಉಲ್ಲೇಖಿಸಲಾಗಿದ್ದು, ಇಂದು ಸಂಜೆ 7:01ಕ್ಕೆ ಟ್ರೈಲರ್ ಬಿಡುಗಡೆಯಾಗಲಿದೆ.
ಗೀತು ಮೋಹನ್‌ದಾಸ್ ನಿರ್ದೇಶನದ 'ಟಾಕ್ಸಿಕ್' ಚಿತ್ರದಲ್ಲಿ ಯಶ್ ರಾಯ್ ಮತ್ತು ಟಿಕೆಟ್ ಎಂಬ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಕಿಯಾರಾ ಅಡ್ವಾಣಿ ನಾಡಿಯಾ ಪಾತ್ರದಲ್ಲಿ ನಟಿಸಿದ್ದು, ನಯನತಾರಾ ಗಂಗಾ, ಹುಮಾ ಖುರೇಷಿ ಎಲಿಜಬೆತ್, ತಾರಾ ಸುತಾರಿಯಾ ರೆಬೆಕ್ಕಾ ಹಾಗೂ ರುಕ್ಮಿಣಿ ವಸಂತ್ ಮೆಲಿಸ್ಸಾ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.


