LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ನ.5ರಿಂದ ಸಾರಿಗೆ ಬಸ್ ಪ್ರಯಾಣ ದರ ಏರಿಕೆ : ಸಚಿವ ಬೈರತಿ ಸುರೇಶ್ ಘೋಷಣೆ

Advertisement

ಚಿಕ್ಕಬಳ್ಳಾಪುರ: ಈ ತಿಂಗಳ 5 ರಿಂದ ಸರ್ಕಾರಿ ಸ್ವಾಮ್ಯದ ಸಾರಿಗೆ ಬಸ್ ಗಳ ಪ್ರಯಾಣ ದರ ಹೆಚ್ಚಳವಾಗಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು.ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಒಂದು ವರ್ಷದಲ್ಲಿ 5 ಬಾರಿ ಡೀಸೆಲ್ ಬೆಲೆ ಏರಿಕೆ ಮಾಡಿದೆ.

ಇದರಿಂದ ನಮ್ಮ ನಾಲ್ಕೂ ಸಾರಿಗೆ ನಿಗಮಗಳಿಗೆ ವಾರ್ಷಿಕ 2 ಸಾವಿರ ಕೋಟಿ ರೂಪಾಯಿ ನಷ್ಟ ಆಗುತ್ತಿದೆ. ಈಗಾಗಲೇ ಸಂಸ್ಥೆಗಳು 9 ಸಾವಿರ ಕೋಟಿ ರೂಪಾಯಿ ನಷ್ಟದಲ್ಲಿವೆ ಎಂದು ಹೇಳಿದರು.ಈ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡುವುದು ಅನಿವಾರ್ಯ ಆಗಿದೆ ಎಂದರು.

ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ದರ ಏರಿಕೆ ನಿರ್ಧಾರವನ್ನು ಕೈಗೊಳ್ಳುವ ಜವಾಬ್ದಾರಿಯನ್ನು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಸಂಪುಟ ಸಾರಿಗೆ ಇಲಾಖೆಗೆ ನೀಡಿದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ನವೆಂಬರ್ 4 ರಂದು ಇಲಾಖೆ ಮತ್ತು ಸಾರಿಗೆ ನಿಗಮಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಎಷ್ಟು ಪ್ರಮಾಣದಲ್ಲಿ ಹೆಚ್ಚಿಸಬೇಕೆಂದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಮತ್ತು ನವೆಂಬರ್ 5 ರಿಂದ ಹೊಸ ಪ್ರಯಾಣ ದರ ಜಾರಿಗೆ ಬರಲಿದೆ ಎಂದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ.5ರಿಂದ ಸಾರಿಗೆ ಬಸ್ ಪ್ರಯಾಣ ದರ ಏರಿಕೆ : ಸಚಿವ ಬೈರತಿ ಸುರೇಶ್ ಘೋಷಣೆರಾಯಚೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ! ಶೀಘ್ರದಲ್ಲೇ 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿ : ಡಿ.ಕೆ. ಶಿವಕುಮಾರ್ಕಿವೀಸ್ ಗೆ 192 ರನ್ ಗಳ ಟಾರ್ಗೆಟ್ ನೀಡಿದ ಭಾರತ ಪಾಕಿಸ್ತಾನ- ಒಮಾನ್ ಹಾಗೂ ಆಸ್ಟ್ರೇಲಿಯಾ- ಅಪಘಾನಿಷ್ಠಾನ್ ಪಂದ್ಯ ಇಂದು ತ್ರಿಕೋನ ಏಕದಿನ ಕ್ರಿಕೆಟ್ ಸರಣಿ: ಪಾಕಿಸ್ತಾನ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ 2-1 ರಿಂದ ಟೆಸ್ಟ್ ಸರಣಿ ಗೆದ್ದ ದ. ಆಪ್ರಿಕಾ ಪಟ್ಟಣದ ಶ್ರೀನಿಧಿ ಭಾರತ್ ಗ್ಯಾಸ್ ಗೋದಮನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಂತರಿಸುವಂತೆ ಮನವಿಎಸ್.ವಿ.ವಿ.ಕೆ.ಟ್ರಸ್ಟ್ನ ಆರ್ಯುವೇದೀಕ್ ಮೆಡಿಕಲ್ ಕಾಲೇಜ್ ಅಂತಿಮ ವಿದ್ಯಾರ್ಥಿಗಳ ವೈದ್ಯೋತ್ತಾನ ಪದವಿಪ್ರದಾನ ಕಾರ್ಯಕ್ರಮಸರ್ಕಾರದ ಕಣ್ಣಿಗೆ ಮಣ್ಣು, ಅನ್ನದಾತನ ಬದುಕಿಗೆ ಕಣ್ಣೀರು: ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ರವಿ ಪಾಟೀಲ್ ಸಿಡಿದೆದ್ದಿದ್ದು ಹೀಗೆ!