LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಸ್ತೆಗೆ ಬಾಗಿದ ಗಿಡ-ಗಂಟಿ ಸಂಚಾರಕ್ಕೆ ತೊಂದರೆ

Advertisement
ಚಿಟಗುಪ್ಪ : ಚಿಟಗುಪ್ಪ ತಾಲ್ಲೂಕಿನ ನಾಗನಕೇರಾ ಗ್ರಾಮದಿಂದ ಮನ್ನಾಎಖೇಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಪಕ್ಕದಲ್ಲಿ ಗಿಡ–ಗಂಟಿಗಳು ಬೆಳೆದು ಕೊಂಬೆಗಳು ರಸ್ತೆಗೆ ಬಾಗಿವೆ.ಇದರಿಂದ ವಾಹನಗಳ ಸವಾರರಿಗೆ ತೊಂದರೆಯಾಗುತ್ತಿದೆ.

ಸುಮಾರು ಮೂರು ಕಿಲೋ ಮೀಟರ್ ರಸ್ತೆ ಉದಕ್ಕೂ ಎರಡೂ ಬದಿಗೆ ಮುಳ್ಳು ಕಂಟಿಗಳು ಎತ್ತರಕ್ಕೆ ಬೆಳೆದಿವೆ.ಅಲ್ಲದೆ ರಸ್ತೆ ಮದ್ಯದಲ್ಲಿ ತಗ್ಗು ಗುಂಡಿಗಳು ಇರುವುದರಿಂದ ಪ್ರಯಾಣಿಕರು ಇನ್ನೂ ಹೆಚ್ಚಿನ ತೊಂದರೆ ಎದುರಿಸುತ್ತಿದ್ದಾರೆ.

‘ಗಿಡ–ಗಂಟಿ ಬೆಳೆದ ಕಾರಣ ತಿರುವು ರಸ್ತೆಯಲ್ಲಿ ಎದುರಿನಿಂದ ಬರುವ ವಾಹನಗಳು ಕಾಣುತ್ತಿಲ್ಲ. ಇದರಿಂದ ಅಪಘಾತಗಳು ಸಹಜ ಎಂಬಂತಾಗಿದೆ ಎಂಬುದು ಸವಾರ ವಿಠ್ಠಲ ರೆಡ್ಡಿ ಹೇಳುತ್ತಿದ್ದಾರೆ.

ರಸ್ತೆ ಬದಿ ಹುಲ್ಲು ಬೆಳೆದಿದ್ದರಿಂದ ರಸ್ತೆಗಳು ಕಿರು ರಸ್ತೆಗಳಂತಾಗಿವೆ.ನಿತ್ಯವೂ ಸಂಚರಿಸುವ ಚಾಲಕರಿಗೆ ಆ ಹಾದಿ ಗೊತ್ತಿರುತ್ತದೆ. ಅಪರೂಪಕ್ಕೆ ಬರುವ ಚಾಲಕರು ಗೊಂದಲಕ್ಕೀಡಾಗುತ್ತಾರೆ.ಒಮ್ಮೊಮ್ಮೆ ಎದುರಿನ ವಾಹನಗಳ ಬಗ್ಗೆ ತಿಳಿಯದೇ ಅಪಘಾತಕ್ಕೀಡಾಗುವ ಸಾಧ್ಯತೆ ಹೆಚ್ಚಾಗಿದೆ.ರಸ್ತೆ ಬದಿ ಜಂಗಲ್‌ ಕಟಾವಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ.

ರಸ್ತೆಗಳು ಸಾರ್ವಜನಿಕ ಆಸ್ತಿಗಳು.ಅವುಗಳು ವ್ಯವಸ್ತಿತವಾಗಿ ಇರುವಂತೆ ನೋಡಿಕೊಳ್ಳಬೇಕಾದದ್ದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಕರ್ತವ್ಯ.ತಕ್ಷಣವೇ ರಸ್ತೆ ಪಕ್ಕದ ಹುಲ್ಲು,ಮುಳ್ಳು ಕಂಟಿಗಳು ತೆಗೆದು ಶುಚಿಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರ.

ವರದಿ : ಸಜೀಶ ಲಂಬುನೋರ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ