Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎರಡುವರೆ ವರ್ಷದ ಮಗು ಮಲಗಿದಲ್ಲೇ ಸಾವು

Advertisement
ಕಡಬ(ದಕ್ಷಿಣ ಕನ್ನಡ): ಎರಡೂವರೆ ವರ್ಷದ ಗಂಡು ಮಗು ಮಲಗಿದ್ದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಕಡಬ ತಾಲೂಕಿನ ಕೊಣಾಜೆ ಗ್ರಾಮದಲ್ಲಿ ವರದಿಯಾಗಿದೆ. ದಂಪತಿಯ ಪುತ್ರ ರುದ್ರ ಪ್ರತಾಪ್ ಸಿಂಗ್ (2.5 ವರ್ಷ) ಮೃತಪಟ್ಟಿದ್ದಾನೆ.

ಉತ್ತರ ಪ್ರದೇಶದ ರಾಜಾ ಸಿಂಗ್ ಮತ್ತು ದಿವ್ಯಾಂಶಿ ದಂಪತಿ ಕೊಣಾಜೆಯ ಮಾಲ ಎಂಬಲ್ಲಿಗೆ ಬಂದು, ಲಿಂಡೋರಾಜ್‌ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಮಾರ್ಚ್​ 25ರಂದು ಮಧ್ಯಾಹ್ನದ ವೇಳೆ ಮಗುವಿಗೆ ಊಟ ಕೊಟ್ಟು, ಬಳಿಕ ನಿದ್ದೆ ಬಂದ ಕಾರಣ ಮಲಗಿಸಿದ್ದರು. ಬಳಿಕ ಎಬ್ಬಿಸಿದಾಗ ಮಗು ಏಳದ ಕಾರಣ ಲಿಂಡೋರಾಜ್ ಕಾರಿನಲ್ಲಿ ಕಡಬ ಖಾಸಗಿ ಆಸ್ಪತ್ರೆಗೆ ಕರೆ ತಂದಿದ್ದರು. ವೈದ್ಯರು ಮಗುವನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಕೂಡಲೇ, ಕಡಬ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿಯೂ ವೈದ್ಯರು ಮಗುವನ್ನು ಪರೀಕ್ಷಿಸಿ, ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ. ಮಗು ಆಹಾರ ಗಂಟಲಲ್ಲಿ ಸಿಕ್ಕಿಕೊಂಡು ಅಥವಾ ಬೇರೆ ಯಾವುದೋ ಖಾಯಿಲೆ ಉಲ್ಬಣಗೊಂಡು ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ತಾಯಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತ್ರಿಮೂರ್ತಿ, ''ಈಗಾಗಲೇ ಮೃತ ಮಗುವಿನ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅದರ ವರದಿ ಬಂದ ಬಳಿಕ ಸಾವಿನ ಬಗ್ಗೆ ನಿಖರ ಕಾರಣ ತಿಳಿಯಲಿದೆ'' ಎಂದು ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ