Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಇಬ್ಬರು ಪಾಪಿ ಪುತ್ರರು 

Advertisement
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ ನಡೆದಿದ್ದು, ಆಸ್ತಿಗಾಗಿ ತಂದೆಯನ್ನೇ ಇಬ್ಬರು ಪಾಪಿ ಪುತ್ರರು ಹತ್ಯೆಗೈದ ಘಟನೆ ನಡೆದಿದೆ.

ಬೆಂಗಳೂರಿನ ಇಂದಿರಾನಗರದ ದೂಪನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮಕ್ಕಳಿಂದ ಹಲ್ಲೆಗೊಳಗಾಗಿದ್ದ ತಂದೆ ಮುನಿಕೃಷ್ಣ (70) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಪುತ್ರರಾದ ಮೋಹನ್ ಕುಮಾರ್, ಗಜೇಂದ್ರ ಎಂಬುವರು ಆಸ್ತಿಗಾಗಿ ತಂದೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಆಸ್ತಿ ಹಂಚಿಕೆ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ತಂದೆ ಮತ್ತು ಮಕ್ಕಳ ನಡುವೆ ತೀವ್ರ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ, ಪುತ್ರರು ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ಮುನಿಕೃಷ್ಣ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೃತ್ಯ ಎಸಗಿದ ಬಳಿಕ ಆರೋಪಿಗಳಾದ ಮೋಹನ್ ಕುಮಾರ್ ಮತ್ತು ಗಜೇಂದ್ರ ತಲೆಮರೆಸಿಕೊಂಡಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ