ಹೈದರಾಬಾದ್: ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಇಂದಿಲ್ಲಿ ನಡೆಯುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೪೯ ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಇಲ್ಲಿನ ರಾಜೀವ ಗಾಂಧಿ ಕ್ರೀಡಾಂಗಣದಲ್ಲಿ ಪಂದ್ಯ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ. ಪಂಜಾಬ್ ಕಿಂಗ್ಸ್ ೯ ಪಂದ್ಯಗಳಿAದ ೧೩ ಅಂಕಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.
ಸನ್ ರೈಸರ್ಸ್ ಹೈದರಾಬಾದ್ ೧೦ ಪಂದ್ಯಗಳಿAದ ೧೨ ಅಂಕಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಉಭಯ ತಂಡಗಳು ಬಲಿಷ್ಠ ಬ್ಯಾಟಿಂಗ್ ಬಲವನ್ನು ಹೊಂದಿದ್ದು, ರನ್ ಹಾಗೂ ಸಿಕ್ಸರ್‌ಗಳ ಸುರಿಮಳೆಯನ್ನು ನಿರೀಕ್ಷಿಸಲಾಗುತ್ತಿದೆ.

