ಬೆಳಗಾವಿ :ಜಿಲ್ಲೆ ಅಥಣಿ ತಾಲೂಕಿನ ಕೂಟ್ಟಲಗಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಸುಮಾರು 9.30 ಗಂಟೆಗೆ ದುರ್ಘಟನೆಯೊಂದು ಸಂಭವಿಸಿದೆ. ಗ್ರಾಮದ ಲಕ್ಷ್ಮೀ ಬಾಯಿ ತಂದೆ ಬಸಪ್ಪ ನಂದಗೊಂಡ (60) ಅವರ ಮಣ್ಣಿನ ಮೇಲ್ಮುದ್ದೆ ಮನೆಯನ್ನು ದುರಸ್ತಿ ಮಾಡುವ ಕಾಮಗಾರಿ ನಡೆಯುತ್ತಿತ್ತು.
ಈ ವೇಳೆ ಮನೆ ದುರಸ್ತಿ ಕೆಲಸದಲ್ಲಿ ತೊಡಗಿದ್ದ ಮಾದೇವ್ ಕೃಷ್ಣಪ್ಪ ಬಡಿಗೇರ್ (48) ಹಾಗೂ ಸೈಯದ್ ಕೆಂಪವಾಡಿ (32) ಎಂಬ ಇಬ್ಬರು ಕಾರ್ಮಿಕರ ಮೇಲೆ ಏಕಾಏಕಿ ಮನೆಯ ಮೇಲ್ಮುದ್ದೆ ಕುಸಿದು ಬಿದ್ದಿದೆ. ಪರಿಣಾಮ ಇಬ್ಬರೂ ಮಣ್ಣಿನಡಿ ಸಿಲುಕಿಕೊಂಡಿದ್ದಾರೆ.
ತಕ್ಷಣ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಇಬ್ಬರನ್ನೂ ಮಣ್ಣಿನಡಿಯಿಂದ ಹೊರತೆಗೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.
ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐಗಳ ಪೊಲೀಸ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವರದಿ :ಅಜಯ ಕಾಂಬಳೆ


